
ಕುಶಾಲನಗರ, ನ 25: ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಫಿಟ್ ಫೆಸ್ಟ್ ಗೆ
ಚಾಲನೆ ನೀಡಲಾಯಿತು.
ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧಿ ಮಿಸ್ಟರ್ ಕೊಡಗು ವಿಜೇತ ಅಜಯ್ ಲಾರಾ ಕ್ರೀಡಾಕೂಟ ಉದ್ಘಾಟಿಸಿದರು.
ವಿವೇಕಾನಂದ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂಜಿಎಂ ಕಾಲೇಜು ಪ್ರಾಂಶುಪಾಲೆ ಟಿ.ಎ.ಲಿಖಿತಾ ಪಾಲ್ಗೊಂಡು ಮಾತನಾಡಿದರು.
ವಿವೇಕಾನಂದ ಕಾಲೇಜು ಪ್ರಾಂಶುಪಾಲೆ ಕ್ಲಾರ ರೇಷ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಮಹೇಶ್, ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.
Back to top button
error: Content is protected !!