ಕುಶಾಲನಗರ, ಸೆ 03: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಬಸವೇಶ್ವರ ಬಡಾವಣೆಯಲ್ಲಿ ಪಂಚಾಯಿತಿ ವತಿಯಿಂದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ವಾರ್ಡ್ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಕಾಮಗಾರಿ ಪರಿಶೀಲನೆ ನಡೆಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಬಸವೇಶ್ವರ ಬಡಾವಣೆಯಲ್ಲಿ ೧೫ ನೇ ಹಣಕಾಸಿನಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಮಣಿಮಾಲ ಕುಬೇರರವರ ಮನೆಯಿಂದ ಅಕ್ಕಮ್ಮರವರ ಮನೆವೆರೆಗೆ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ.
ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್, ವಾರ್ಡ್ ನಂಬರ್ ಎರಡರಲ್ಲಿ ಸುಂದರನಗರ, ಬಸವೇಶ್ವರ ಬಡಾವಣೆ, ನವಗ್ರಾ ಹಾಗೂ ವಿನಾಯಕ ಬಡಾವಣೆ ಇದೆ. ವಾರ್ಡ್ ವ್ಯಾಪ್ತಿ ದೊಡ್ಡದಾಗಿದ್ದು, ಹಂತಹಂತವಾಗಿ ವಾರ್ಡನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ೧೫ ನೇ ಹಣಕಾಸಿನಿಂದ ಬಸವೇಶ್ವರ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದ್ದು, ಕಾಮಗಾರಿಯನ್ನು ಪರಿಶೀಲನೆ ಮಾಡಲಾಗಿದೆ ಎಂದರು.
ಈ ಸಂದರ್ಭ ಬಸವೇಶ್ವರ ಬಡಾವಣೆ ನಿವಾಸಿಗಳು ಇದ್ದರು.
Back to top button
error: Content is protected !!