ಕುಶಾಲನಗರ, ಡಿ.01:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೇತೃತ್ವದಲ್ಲಿ 23ನೇ ಮಹಾ ಅಧಿವೇಶನವನ್ನು ದಾವಣಗೆರೆಯಲ್ಲಿ ನಡೆಸಲು ಚಿತ್ರದುರ್ಗ, ಬಳ್ಳಾರಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕಗಳ ಸಹಯೋಗದಲ್ಲಿ ದಾವಣಗೆರೆ ಜಿಲ್ಲಾ ಘಟಕ ಆತಿಥ್ಯ ವಹಿಸಿಕೊಂಡಿದೆ.
1904 ರಲ್ಲಿ ಪೂಜ್ಯ ಹಾನಗಲ್ ಕುಮಾರಸ್ವಾಮಿ ಯವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯನ್ನು ಸ್ಥಾಪಿಸಿದರು. ಕಳೆದ 118 ವರ್ಷಗಳಿಂದ ಸಮಾಜದ ಸಂಘಟನೆ ಮತ್ತು ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತ ಬಂದಿದೆ. ಇಂದಿನ ದಿನಮಾನಗಳಲ್ಲಿ ಸಮಾಜದ ಸಂಘಟನೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಈ ದಿಶೆಯಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸಂಘಟಿಸುವ ಉದ್ದೇಶದಿಂದ ಇಲ್ಲಿಯವರೆಗೆ 22 ಅಧಿವೇಷನಗಳು ನಡೆದಿವೆ. ಈಗ 23 ನೇ ಅಧಿವೇಶನ ಜರುಗಲಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್ ತಿಳಿಸಿದರು.
ಕುಶಾಲನಗರದ ಮಹಾಲಕ್ಷ್ಮಿ ರೆಸಿಡೆನ್ಸಿ ಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಹಾ ಅಧಿವೇಶನಕ್ಕೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರನ್ನು ಆಹ್ವಾನಿಸಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಸಮಾಜ ಭಾಂದವರು ಭಾಗವಹಿಸಲಿದ್ದಾರೆ. ಮೂರು ದಿನಗಳು ನಡೆಯುವ ಸಮಾವೇಶದಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೈಗಾರಿಕಾ, ಕೃಷಿ,ಯುವ, ಮಹಿಳಾ ಅಧಿವೇಶನಗಳ ಜೊತೆಗೆ ಸಾಂಸ್ಕೃತಿಕ ಪರಂಪರೆ ಮುಂತಾದ ಗೋಷ್ಠಿಗಳು ಇರುತ್ತವೆ.ಮಹಾಸಭೆಯ ಇತಿಹಾಸ, ಕಾರ್ಯಚಟುವಟಿಕೆಗಳನ್ನು ಪರಿಚಯಿಸುವ ವಸ್ತು ಪ್ರದರ್ಶನ ಮತ್ತು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುತ್ತೆ ರೇಣುಕಾ ಪ್ರಸಾದ್ ತಿಳಿಸಿದರು.
ಅಧಿವೇಶನದಲ್ಲಿ ಪಾಲ್ಗೊಳ್ಳುವರು ಜಿಲ್ಲಾ ಸಮಿತಿಗಳ ಮೂಲಕ ಅಥವಾ ಅನ್ ಲೈನ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿರುವ ಸಂಖ್ಯೆಗೆ ಅನುಗುಣವಾಗಿ ಸಮ್ಮೇಳನದಲ್ಲಿ ವ್ಯವಸ್ಥೆ ಮಾಡಲಾಗಿರುತ್ತೆ. ಕೊಡಗು ಜಿಲ್ಲೆಯ ಎಲ್ಲಾರೂ ಭಾಗವಹಿಸಲು ಕೋರಿದರು.
ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ, ಜಿಲ್ಲಾ ಖಜಾಂಚಿ ಉದಯಕುಮಾರ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆಯರಾದ ಭಾಗೀರಥಿ ಜಗಧೀಶ, ಅನುರಾಧ ಚಂದ್ರಶೇಖರ್, ಜಿಲ್ಲಾ ಸಮಿತಿಯ ನಿರ್ದೇಶಕರಾದ ಪಿ.ಮಹಾದೇವಪ್ಪ, ಕೆ.ಎಲ್.ನಟೇಶ್ ಕುಮಾರ್, ಟಿ.ಎನ್. ಶಿವಾನಂದ, ಎಸ್.ಎಸ್.ನಾಗರಾಜ್ ಮತ್ತು ರಾಜ್ಯ ಯುವ ಘಟಕದ ನಿರ್ದೇಶಕ ವಿರೂಪಾಕ್ಷ ಇತರರು ಉಪಸ್ಥಿತರಿದ್ದರು.
Back to top button
error: Content is protected !!