ಕುಶಾಲನಗರ, ಡಿ 05: ಆಲೂರು ಸಿದ್ದಾಪುರ ಗ್ರಾಪಂ ವ್ಯಾಪ್ತಿಯ ಹೊಸಗುತ್ತಿ ಗ್ರಾಮದಲ್ಲಿ ನೂತನವಾಗಿ ಆರಂಭವಾದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಹಿಳೆಯರು ಸಬಲೀಕರಣಗೊಳ್ಳುವುದರ ಜೊತೆಗೆ ಸ್ವಾವಲಂಬಿಯಾಗಿ ಬದುಕಲು ಹೈನುಗಾರಿಕೆಯಲ್ಲಿ ಉತ್ತಮ ಅವಕಾಶವಿದ್ದು,ಇದರ ಜೊತೆಯಲ್ಲಿ ಸರಕಾರದ ವತಿಯಿಂದ ವಿವಿಧ ಯೋಜನೆಯಗಳ ಮೂಲಕ ಹೈನುಗಾರಿಕೆಗೆ ಅನುಕೂಲವಾಗುವ ಸಾಲ ಸೌಲಭ್ಯಗಳ ಜೊತೆಗೆ ಬೇಕಾಗುವ ಸವಲತ್ತುಗಳನ್ನು ನೀಡಲಾಗುತ್ತಿದೆ, ಅಲ್ಲದೆ ರಾಜ್ಯ ಸರ್ಕಾರವು ಈಗಾಗಲೇ ಹಾಲಿನ ದರದ ಜೊತೆಗೆ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹ ಧನದ ರೂಪ ಸಂಘದ ಸದಸ್ಯರ ಖಾತೆಗೆ ಹಣವನ್ನು ಹಾಕಲಾಗುತ್ತಿದೆ. ವಿವಿಧ ಯೋಜನೆಯ ಅಡಿಯಲ್ಲಿ ರಿಯಾಯಿತಿ ದರದಲ್ಲಿ ಹಸುಗಳ ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಮುಂದುವರೆ ಬೇಕೇಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು.
ಮುಖ್ಯ ಅತಿಥಿಯಾಗಿ ಅಗಮಿಸಿದ ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಮಾತಾಡುತ್ತಾ ಮಹಿಳಾ ಸದಸ್ಯರು ಹಾಲು ಉತ್ಪಾದಕರ ಸಂಘಕ್ಕೆ ಗುಣಮಟ್ಟದ ಹಾಲನ್ನು ಹಾಕುವುದರ ಮೂಲಕ ಸಂಘದ ಬೆಳವಣಿಗೆಗೆ ಅನುಕೂಲವಾಗುವುದರ ಜೊತೆಯಲ್ಲಿ ರೈತರು ಆರ್ಥಿಕ ಗುಣಮಟ್ಟವನ್ನು ಸುಧಾರಿಸಿಕೊಳ್ಳಲು ಸಹಕಾರಿಯಾಗುತ್ತದೆ , ಕಟ್ಟಡದ ನಿರ್ಮಾಣಕ್ಕೆ ಒಕ್ಕೂಟದ ವತಿಯಿಂದ 5 ಲಕ್ಷದ ರೂ ವರೆಗೆ ಹಣವನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅದ್ಯಕ್ಷ ವಿ ಎಂ ವಿಜಯ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೈನುಗಾರಿಕೆ ಹೆಚ್ಚು ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಹೊರಗುತ್ತಿ ಗ್ರಾಮದ ನಿವಾಸಿ ಹಾಲಿ ಹಾಸನ ಜಿಲ್ಲಾ ಕೇಂದ್ರ ಬ್ಯಾಂಕ್ ನ ವ್ಯವಸ್ಥಾಪಕ ಕುಮಾರ್ ಗ್ರಾಮದ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘ ಅಧ್ಯಕ್ಷೆ ಜಿ ವಿ ಭಾರತಿ ವಹಿಸಿದರು. ವೇದಿಕೆಯಲ್ಲಿ ರಾಜ್ಯ ಲೆಕ್ಕಪತ್ರ ಇಲಾಖೆಯ ಅಧಿಕಾರಿ ಚುಚೇಗೌಡ. ಹಾಸನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಕುಮಾರ್, , ಹಾಲು ಒಕ್ಕೂಟದ ಸಹಾಯಕ ವ್ಯವಸ್ಥಾಪಕ ವೇಣು, ಜಿಲ್ಲಾ ಸಹಕಾರ ಸಂಘದ ಉಪ ನಿರ್ಭಂದಕರಾದ ಕೃಷ್ಣ ಪ್ರಸಾದ, ಅಲೂರು ಗ್ರಾಮ ಪಂಚಾಯತಿ ಅದ್ಯಕ್ಷ ಮೋಹನ್ ಕುಮಾರ್, ಸದಸ್ಯರಾದ ಕಿರಣ್, ಒಕ್ಕೂಟದ ವಿಸ್ತಾರಣಾಧಿಕಾರಿ ವೀಣಾ, ಸೇರಿದಂತೆ ಹಾಲು ಉತ್ಪಾದಕರ ಸಂಘದ ಸದಸ್ಯರು ವಿವಿಧ ಇಲಾಖೆಯ ಅಧಿಕಾರಿಗಳ ವರ್ಗದವರು ಹಾಸನ ಹಾಲು ಒಕ್ಕೂಟದ ವಿವಿಧ ವಿಭಾಗದ ಅಧಿಕಾರಿ ವರ್ಗದವರು ಹೊಸಗುತ್ತಿ ಗ್ರಾಮದ ಪ್ರಮುಖರು ಹಾಜರಿದ್ದರು.
Back to top button
error: Content is protected !!