ಕಾರ್ಯಕ್ರಮ

ಹಿಮಾಚಲ‌ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ‌: ಕುಶಾಲನಗರದಲ್ಲಿ‌ ಸಂಭ್ರಮಾಚರಣೆ

 ಕುಶಾಲನಗರ, ಡಿ 08:  ಹಿಮಾಚಲ‌ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ‌ ಹಿನ್ನಲೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಕುಶಾಲನಗರದ ಶ್ರೀ‌ ಗಣಪತಿ ದೇವಾಲಯ‌ ಮುಂಭಾಗ ವಿಜಯೋತ್ಸವ ಆಚರಿಸಿದ‌ ಕಾಂಗ್ರೆಸ್ ಮುಖಂಡರು ಹಾಗೂ‌ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಕಾಂಗ್ರೆಸ್ ವಿಜಯದ ಬಗ್ಗೆ ಹರ್ಷ ವ್ಯಕ್ತಪಡಿಸಿ‌ ಕರ್ನಾಟಕ ದಲ್ಲಿ‌ ಕೂಡ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಪ್ರಮುಖರಾದ ಶಿವಶಂಕರ್, ಪ್ರಕಾಶ್, ಮುಸ್ತಾಫ, ಚಂದ್ರು, ರಾಜೇಂದ್ರ, ಖಲೀಮುಲ್ಲಾ, ದೇವು ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!