ಕಾರ್ಯಕ್ರಮ

ಕುಶಾಲನಗರ ಶಿಶು ಪಾಲನಾ ಕೇಂದ್ರದಲ್ಲಿ ಮಕ್ಕಳ ‌ದಿನಾಚರಣೆ

ಕುಶಾಲನಗರ, ನ 29: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು, ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ಹಾಗೂ ಸ್ತ್ರೀಶಕ್ತಿ ತಾಲೂಕು ಒಕ್ಕೂಟ ಸೋಮವಾರಪೇಟೆ ಸಹಯೋಗದಲ್ಲಿ ಕುಶಾಲನಗರ ವಾತ್ಸಲ್ಯ ಶಿಶು ಪಾಲನಾ ಕೇಂದ್ರದ ವತಿಯಿಂದ ಮಕ್ಕಳ ‌ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಶಿಶುಪಾಲನಾ ಕೇಂದ್ರದ ಮಕ್ಕಳಿಗೆ ಅನುಕೂಲವಾಗಲೆಂದು ಕುಶಾಲನಗರ ರೋಟರಿ ಸಂಸ್ಥೆಯಿಂದ ಟೇಬಲ್‌ ಮತ್ತು ಚೇರ್ ಗಳನ್ನು ಕೊಡುಗೆ ನೀಡಲಾಯಿತು. ಕೊಡುಗೆ ನೀಡಿ ಮಾತನಾಡಿದ
ಕುಶಾಲನಗರ ರೋಟರಿ ಸಂಸ್ಥೆ ಅಧ್ಯಕ್ಷ ಮನು ಪೆಮ್ಮಯ್ಯ, ಮಕ್ಕಳಿಗೆ ಅನುಕೂಲಕರ ಕಾರ್ಯಕ್ರಮಗಳನ್ನು ರೋಟರಿ ಹಮ್ಮಿಕೊಂಡು ಬರುತ್ತಿದೆ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಿ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಶಿಶು ವಿಹಾರಗಳಲ್ಲಿ ಉತ್ತಮ ಸೇವೆ ಲಭಿಸುತ್ತಿದ್ದು ಪೋಷಕರು ಇದನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಮಕ್ಕಳನ್ನು ಇಲ್ಲಿಗೆ ದಾಖಲಿಸಬೇಕಿದೆ. ಇಂತಹ ಕೇಂದ್ರಗಳಿಗೆ ನಮ್ಮ ಸಹಕಾರ ಸದಾ ಇರಲಿದೆ ಎಂದರು.
ಸ್ತ್ರೀ ಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷೆ
ರೆಹನಾ ಸುಲ್ತಾನ ಮಾತನಾಡಿ, ಶಿಶುಪಾಲನಾ ಕೇಂದ್ರ‌ದ ಕಾರ್ಯನಿರ್ವಹಣೆ, ಸರಕಾರದ ಯೋಜನೆ,‌ ಮಕ್ಕಳ ಪಾಲನೆ ಬಗ್ಗೆ ಮಾಹಿತಿ ಒದಗಿಸಿದರು. ಕೇಂದ್ರಕ್ಕೆ ಸಹಕಾರ ನೀಡುತ್ತಿರುವ ದಾನಿಗಳ ಕಾರ್ಯವನ್ನು ಶ್ಲಾಘಿಸಿದರು. ಉದ್ಯೋಗಸ್ತ‌ ತಾಯಂದಿರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೇಂದ್ರಗಳ ಸ್ಥಾಪನೆ ಅಗತ್ಯವಿದೆ ಎಂದರು.
ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಛದ್ಮವೇಷ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭ ರೋಟರಿ
ಕಾರ್ಯದರ್ಶಿ ಹೆಚ್.ಪಿ.ಮಂಜುನಾಥ್, ಮಾಜಿ ಅಧ್ಯಕ್ಷರುಗಳಾದ ಎಸ್.ಕೆ.ಸತೀಶ್, ಶೋಭಾ ಸತೀಶ್, ಆರತಿ ಶೆಟ್ಟಿ, ಸ್ತ್ರೀ ಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷೆ ಹೇಮಲತಾ, ಉಪಾಧ್ಯಕ್ಷೆ ಯಶೋಧ, ನಿರ್ದೇಶಕರಾದ ದಮಯಂತಿ, ಸರೋಜ ಸೇರಿದಂತೆ ಕೇಂದ್ರದ ಶಿಕ್ಷಕರು, ಪೋಷಕರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!