ಕುಶಾಲನಗರ, ಡಿ 17:
ಪ್ರಧಾನಿ ಮೋದಿ ಅವರ ಬಗ್ಗೆ ಅವಹೇಳನ ಮಾಡಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ದ ಕುಶಾಲನಗರ ನಗರ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಯಿತು.
ಕುಶಾಲನಗರದ ಗಣಪತಿ ದೇವಾಲಯ ಮುಂಭಾಗ ಪ್ರತಿಭಟಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಬಿಲಾವಲ್ ಭುಟ್ಟೊ ವಿರುದ್ದ ಧಿಕ್ಕಾರ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ವಿರುದ್ದ ಕೂಡ ಆಕ್ರೋಷ ವ್ಯಕ್ತ ಪಡಿಸಲಾಯಿತು.
ಈ ಸಂದರ್ಭ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ವಿಶ್ವನಾಯಕ ಮೋದಿ ಬಗ್ಗೆ ಪಾಕಿಸ್ತಾನ ವಿದೇಶಾಂಗ ಸಚಿವ ಅವಹೇಳನಾಕಾರಿಯಾಗಿ ಮಾತನಾಡಿರುವುದು ಖಂಡನೀಯ. ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೇವಲ ವೋಟ್ ಬ್ಯಾಂಕ್ ಗಾಗಿ ಉಗ್ರದಾಳಿಯನ್ನು ಸಮರ್ಥಿಸಿಕೊಳ್ಳುತ್ತಿರುವುದುನಾಚಿಕೆಗೇಡಿನ ಸಂಗತಿ. ಇದನ್ನು ಪ್ರತಿಯೊಬ್ಬ ಪ್ರಜೆ ಖಂಡಿಸಬೇಕು ಎಂದರು.
ಸೋಮವಾರಪೇಟೆ ಮಂಡಲ
ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೆರೂರು ಮಾತನಾಡಿದರು.
ಪ್ರತಿಭಟನೆಯಲ್ಲಿ ಪುರಸಭೆ ಅಧ್ಯಕ್ಷ ಬಿ.ಜೈವರ್ಧನ್, ಸದಸ್ಯ ಕೆ.ಜಿ.ಮನು, ನಾರಾಯಣ್,
ಕುಡಾ ಅಧ್ಯಕ್ಷ ಎಂ.ಎಂ.ಚರಣ್, ನಿರ್ದೇಶಕ ವೈಶಾಖ್, ಪ್ರಮುಖರಾದ ಎಂ.ಡಿ.ಕೃಷ್ಣಪ್ಪ, ಶಿವಾಜಿ, ವೇದಾವತಿ, ಪ್ರವೀಣ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಡಿ.ಆರ್.ಸೋಮಶೇಖರ್, ವರದ, ಸುಮನ್, ಆದರ್ಶ್, ಶಿವಶಂಕರ್ ಮತ್ತಿತರರು ಇದ್ದರು.
Back to top button
error: Content is protected !!