ಕುಶಾಲನಗರ, ಡಿ 18: ಅಸಂಘಟಿತ ಕಾರ್ಮಿಕರ ಮತ್ತು ನೌಕರರ ವಿಭಾಗದ ಕೊಡಗು ಜಿಲ್ಲಾ ಅಧ್ಯಕ್ಷರನ್ನಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆದ ಹಾಲಿ ಸದಸ್ಯ ಟಿ.ಪಿ.ಹಮೀದ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ
ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಮತ್ತು ನೌಕರರ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಉದಿತ್ ರಾಜ್ ಈ ನೇಮಕ ಮಾಡಿರುವುದರಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯೋನ್ಮುಖರಾಗಬೇಕೇಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Back to top button
error: Content is protected !!