ಕೂಡಿಗೆ, ಏ. 16: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಅಲಿಸಿದರು. ಸ್ಧಳೀಯ ಗ್ರಾಮಸ್ಥರು ವಸತಿ ರಹಿತರಾಗಿದ್ದು, ಅವರುಗಳಿಗೆ ವಸತಿ ಸೌಕರ್ಯ ಒದಗಿಸುವ ಬಗ್ಗೆ ಶಾಸಕರ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಖುದ್ದಾಗಿ ಶಾಸಕರು ಬ್ಯಾಡಗೊಟ್ಟ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬ್ಯಾಡಗೊಟ್ಟ ಗ್ರಾಮದ ಕಾಲೋನಿಯಲ್ಲಿ 10.ಕ್ಕೂ. ಹೆಚ್ಚು ಕುಟುಂಬದವರು ವಸತಿ ಸೌಕರ್ಯ ಇಲ್ಲದೆ ಇರುವ ಮನೆಗಳು ಬೀಳುವ ಹಂತದಲ್ಲಿದ್ದು, ಅಲ್ಲದೆ ಮನೆಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಿಕೊಂಡು ಬದುಕು ಸಾಗಿಸುತ್ತಿರುವದನ್ನು ಕಂಡು ಶಾಸಕರು ತುರ್ತಾಗಿ ವಸತಿ ರಹಿತರ ಪಟ್ಟಿಯನ್ನು ತಯಾರಿಸಿ , ಕ್ರಮಬದ್ಧವಾಗಿ ಪರಿಶಿಷ್ಟ ಜಾತಿಯವರಿಗೆ ಅನುಗುಣವಾಗಿ ,ಶೀಘ್ರವಾಗಿಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕ್ರಮ ವಹಿಸಲು ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಬ್ಯಾಡಗೊಟ್ಟ ಗ್ರಾಮದಲ್ಲಿ ಇರುವ ಜಾಗದಲ್ಲಿ ನಿವೇಶನ ನಿರ್ಮಿಸಿಕೊಂಡು ಹೋಗಲು ಸರಕಾರದ ನಿಯಮಾನುಸಾರ ವಸತಿಗಳನ್ನು ಕಲ್ಪಿಸಿಕೊಂಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಶಾಲನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮ ಪಂಚಾಯತಿ ಸದಸ್ಯರಾದ ಟಿ.ಪಿ. ಹಮೀದ್, ಅರುಣ್ ರಾವ್, ಅನಂತ, ಶಿವಕುಮಾರ್, ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನೀತ್, ಜಿಲ್ಲಾ ಐ. ಎನ್. ಟಿ. ಸಿ ಘಟಕದ ಅಧ್ಯಕ್ಷ ಅಣ್ಣಯ್ಯ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮಲೀಲಾ, ಸೇರಿದಂತೆ ಗ್ರಾಮದ ಪ್ರಮುಖರು ಹಾಜರಿದ್ದರು.
Back to top button
error: Content is protected !!