ಕುಶಾಲನಗರ, ಡಿ 22: ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಕೈಗಾರಿಕಾ ಪ್ರದೇಶದಲ್ಲಿನ ಕಾಫಿ ಉದ್ಯಮ ಸೇರಿದಂತೆ ಇನ್ನಿತರ ಉದ್ದಿಮೆಗಳ 350 ಕ್ಕೂ ಹೆಚ್ಚು ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಉಚಿತ ಶಿಬಿರ ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಕೂಡ್ಲೂರು ಕೈಗಾರಿಕಾ ಬಡಾವಣೆಯ ಮಾಲೀಕರ ಅಸೋಸಿಯೇಷನ್ ಹಾಗು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯ ಸಹಯೋಗದೊಂದಿಗೆ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಕಾರ್ಮಿಕರು ವೈದ್ಯಕೀಯ ಪರೀಕ್ಷೆಗೊಳಪಟ್ಟರು.
ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಿಪಿಎಲ್ ಕಾರ್ಡುಗಳನ್ನು ಹೊಂದಿರುವ ಪ್ರತಿಯೊಬ್ಬರು ಆಯುಷ್ಮಾನ್ ಆರೋಗ್ಯ ಕಾರ್ಡುಗಳನ್ನು ಹೊಂದುವ ಮೂಲಕ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಕರೆ ನೀಡಿದರು.
ಗೋಪಾಲಗೌಡ ಆಸ್ಪತ್ರೆಯ ನರರೋಗ ತಜ್ಞೆ ಡಾ.ಧನ್ಯಶುಶ್ರುತ್ ಮಾತನಾಡಿ, ಆರೋಗ್ಯವಂತ ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಎಲ್ಲೆಡೆಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಯ ವತಿಯಿಂದ ಎಲ್ಲಾ ಖಾಯಿಲೆಗಳಿಗೆ ಪೋನಿನ ಮೂಲಕ ಉಚಿತ ಸಲಹೆ ಮತ್ತು ಚಿಕಿತ್ಸೆ ಒದಗಿಸುವ ಸೇವೆಗೆ 0821 4001606 ಇಲ್ಲಿ ಕರೆ ಮಾಡಬಹುದು ಎಂದು ಡಾ.ಧನ್ಯ ತಿಳಿಸಿದರು.
ಆದ್ದರಿಂದ ಇದರ ಪ್ರಯೋಜನ ಪ್ರತಿಯೊಬ್ಬರಿಗು ದೊರಕಬೇಕೆಂದು ಕರೆಕೊಟ್ಟರು.
ಕೊಡಗು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ 5.60 ಲಕ್ಷ ಜನರಿದ್ದು ಕೇವಲ 1.10 ಲಕ್ಷ ಮಂದಿ ಮಾತ್ರ ಆಯುಷ್ಮಾನ್ ಕಾರ್ಡು ಹೊಂದಿದ್ದಾರೆ. ಆದರೆ ಎಲ್ಲರೂ ಹೊಂದುವ ಮೂಲಕ ಸರ್ಕಾರದ ಪ್ರಯೋಜನಗಳನ್ನು ಪಡೆಯಬೇಕೆಂದರು.
ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ಟಿ.ಎಂ.ಪ್ರಕಾಶ್, ಕೊಡಗು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಟಿ.ದಿನೇಶ್, ಕೈಗಾರಿಕಾ ಉದ್ಯಮಿಗಳ ಸಂಘದ ಅಧ್ಯಕ್ಷ ಎ.ಎನ್.ಪ್ರವೀಣ್, ಭಾವನಾ ಪ್ರವೀಣ್, ಕಾರ್ಯದರ್ಶಿ ಜೇಕಬ್, ನಿರ್ದೇಶಕರಾದ ಸಾದಿಕ್, ಡಿ.ಸಿ.ಪ್ರಭಾಕರ್, ರಾಜಶೇಖರ್, ಪುನೀತ್ ಇದ್ದರು.
ಉಚಿತ ಆರೋಗ್ಯ ಶಿಬಿರದಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಧನ್ಯ ಶುಶ್ರುತ್ ಮಾರ್ಗದರ್ಶನದಲ್ಲಿ ಡಾ.ಆನಂದ್ ಆರಾಧ್ಯ,
ಡಾ.ಲಿಂಗಾಚಾರಿ ನೇತೃತ್ವದಲ್ಲಿ 9 ಮಂದಿ ವೈದ್ಯರು ಹಾಗು 20 ಮಂದಿ ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಪಿಡಿಒ ಸಂತೋಷ್, ಕೂಡಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ತೇಜಶ್ರೀ ಇದ್ದರು.
Back to top button
error: Content is protected !!