ಕಾರ್ಯಕ್ರಮ
ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ
ಕುಶಾಲನಗರ, ಜ 03: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರಗಳೊಂದಿಗೆ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೇಕೆಂದು ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ ಅವರು, ಸರ್ಕಾರಿ ಕಾಲೇಜಿನಲ್ಲಿ ಹಲವು ಮಕ್ಕಳು ಪ್ರತಿಭಾವಂತರಿದ್ದಾರೆ.
ಆ ಪ್ರತಿಭೆಗಳಿಗೆ ಪೂರಕವಾದ ವಾತಾವರಣ ದೊರಕಬೇಕು.
ಹಾಗಾಗಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡುವ ಮೂಲಕ ಗುರಿ ಸಾಧಿಸಲು ಕರೆಕೊಟ್ಟರು.
ವಿದ್ಯಾರ್ಥಿಗಳು ವ್ಯಾಸಾಂಗ ಮುಗಿದೊಡನೆ ಉದ್ಯೋಗ ಕಂಡು ಕೊಂಡ ಬಳಿಕ ಹೆತ್ತವರನ್ನು ಕಡೆಗಣಿಸದಿರಲು ಶ್ರೀಗಳು ಹೇಳಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಶ್ರೀಗಳು ಸಂವಾದ ನಡೆಸಿದರು.
ಇದೇ ಸಂದರ್ಭ ಹಾಸನದ ಶ್ರೀ ಶಂಭುನಾಥಸ್ವಾಮೀಜಿ, ನಿವೃತ್ತ ಪ್ರಾಂಶುಪಾಲ ಪ್ರೊ.ಜಯಪ್ರಕಾಶ್ ಗೌಡ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸೀನಪ್ಪ ಇದ್ದರು.