ಕ್ರೀಡೆ

ಎಂಜಿಎಂ ಕಾಲೇಜಿನಲ್ಲಿ‌ ವಾರ್ಷಿಕ ಕ್ರೀಡಾಕೂಟಕ್ಕೆ‌ ಚಾಲನೆ

ಕುಶಾಲನಗರ, ಜ‌ 05: ಜೀವನದಲ್ಲಿ ಕ್ರೀಡೆಗಳು‌ ದೈಹಿಕ ವಿಕಸನಕ್ಕೆ ಸಹಕಾರಿಯಾಗಲಿವೆ ಎಂದು ನಿವೃತ್ತ ಕ್ರೀಡಾ ತರಬೇತುದಾರ ಅಂತೋಣಿ ಡಿಸೋಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕುಶಾಲನಗರದ ಮಹಾತ್ಮಾಗಾಂಧಿ ಪದವಿ ಕಾಲೇಜಿನಲ್ಲಿ‌ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಪ್ರಾಥಮಿಕ ಶಿಕ್ಷಣದ ಅವಧಿಯಿಂದಲೇ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಎಂ. ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದ ಅವರು, ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪ್ರೋತ್ಸಾಹ ನೀಡುವಂತಾಗಬೇಕು ಎಂದರು.

3 ದಿನಗಳ ಕಾಲ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಕ್ರೀಡಾಜ್ಯೋತಿ ಮೆರವಣಿಗೆಗೆ ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲ ಟಿ.ಎ ಲಿಖಿತ ಚಾಲನೆ ನೀಡಿದರು.

ಕಾಲೇಜು ವಿದ್ಯಾರ್ಥಿ ಕೆ.ಎನ್.ಧಣಿ ನೇತೃತ್ವದಲ್ಲಿ ಜ್ಯೋತಿಯನ್ನು ಕಾಲೇಜು ತನಕ ಕೊಂಡೊಯ್ಯಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮೂಲಕ ಪ್ರಕಟಗೊಂಡ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ‌ ಎನ್.ಎನ್ ಶಂಭುಲಿಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಟಿ.ಎ. ಲಿಖಿತ ಮತ್ತು ಬಿ.ಎಸ್ ಕ್ಲಾರಾ ರೇಷ್ಮ, ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಅಧ್ಯಕ್ಷ ಎಂ.ಎನ್ ಚಂದ್ರಮೋಹನ್, ವಿದ್ಯಾಸಂಸ್ಥೆಯ ಪ್ರಮುಖರಾದ ಕೆ.ಎನ್ ನಂಜಪ್ಪ ಇದ್ದರು.

ಕ್ರೀಡಾ ಕೂಟದಲ್ಲಿ ಹ್ಯಾಂಡ್‌ಬಾಲ್, ಫುಟ್ಬಾಲ್, ಕ್ರಿಕೆಟ್, ವಾಲಿಬಾಲ್, ಆಟೋಟ ಸ್ಪರ್ಧೆಗಳು ನಡೆಯಲಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!