ಶನಿವಾರಸಂತೆ,ಜ 09: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರ ಮುಗಿದು ವರ್ಷ ಕಳೆದರೂ ಚುನಾವಣೆ ನಡೆಸಲು ರಾಜ್ಯ ಸರ್ಕಾರ ವಿಳಂಬ ದೋರಣೆ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಮಂತರ್ ಗೌಡ ದೂರಿದರು
ಶನಿವಾರಸಂತೆ ನಂದೀಶ್ವರ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಸೋಮವಾರ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸೋಮವಾರಪೇಟೆ ಬ್ಲಾಕ್ ಪದಾಧಿಕಾರಿಗಳ ಪದಗ್ರಹಣ ಮತ್ತು ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಿ. ಪಂ.ಹಾಗೂ ತಾ.ಪಂ.ಗಳಿಗೆ ಸೂಕ್ತ ಅನುದಾನವನ್ನು ಒದಗಿಸದೆ ಪಂಚಾಯಿತ್ ರಾಜ್ಯ ವ್ಯವಸ್ಥೆಯನ್ನು ಕುಂದು ತರಲಾಗುತ್ತಿದೆ. ಗ್ರಾಮಸಭೆ ಮೂಲಕ ಸಂಸದರು,ಶಾಸಕರ ಅನುದಾನದಲ್ಲಿ ಕಾಮಗಾರಿಯನ್ನು ಕೈಗೊಳ್ಳಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗಿದೆ. ಭ್ರಷ್ಟ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ್ಜ ಉತ್ತಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಾಮಾನ್ಯ ಜನರಿಗೂ ಅಧಿಕಾರ ನೀಡಬೇಕು. ಅಧಿಕಾರ ವಿಕೇಂದ್ರಿಕರಣ ಮಾಡುವ ಉದ್ದೇಶದಿಂದ ಗ್ರಾಮ ಪಂಚಾಯತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.
ಬೂತ್ ಮಟ್ಟದಲ್ಲಿಯೂ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗೂ ಚುರುಕು ನೀಡುತ್ತಿದೆ ಎಂದರು.
ಕೆಪಿಸಿಸಿ ವಕ್ತಾರ ಎಚ್.ಎಸ್.ಚಂದ್ರಮೌಳಿ ಮಾತನಾಡಿ ಕೋಮುವಾದಿ ಬಿಜೆಪಿ ಧರ್ಮದ ಹೆಸರಿನಲ್ಲಿ ಅಮಾಯಕ ಯುವಕರನ್ನು ಸಾವಿನ ದವಡೆಗೆ ತಳ್ಳಿ ,ಅವರ ಸಾವಿನ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಯಾವುದೇ ಸಮುದಾಯ, ಪಂಥಕ್ಕೆ ಸೀಮಿತವಾಗಿಲ್ಲ.ಇದು ಎಲ್ಲಾ ಸಮುದಾಯಗಳ ಪಕ್ಷವಾಗಿದೆ ಎಂದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಸತೀಶ್ ಮಾತನಾಡಿ,ಕಾಂಗ್ರೆಸ್ ಪಕ್ಷದ ನಾಯಕರು ಒಟ್ಟಾಗಿ ಮನೆ ಮನೆಗಳಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಬೇಕು ಎಂದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ,ಪಂಚಾಯತ್ ರಾಜ್ ವ್ಯವಸ್ಥೆ ಆಶಯಗಳು ಹಾಗೂ ಧೆಯೋದ್ದೇಶಗಳ ಈಡೇರಿಕೆಗೆ ರಾಜೀವ್ ಗಾಂಧಿ ಭದ್ರ ತಳಹದಿಯನ್ನು ಹಾಕಿಕೊಟ್ಟಿದ್ದಾರೆ ಎಂದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತನ್ನೀರ ಮೈನ ಅಧ್ಯಕ್ಷತೆ ವಹಿಸಿದ್ದರು.ಪಂಚಾಯತ್ ರಾಜ್ ಸಂಘಟನೆ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಎಸ್.ಎಸ್.ಶಿವಾನಂದ ,ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್,ಡಿಸಿಸಿ ಸದಸ್ಯ ಶಾಜಿ,ಪುಷ್ಪನಾಣಯ್ಯ ಪರಿಶಿಷ್ಟ ಜಾತಿ, ವರ್ಗದ ಘಟಕದ ಅಧ್ಯಕ್ಷ ಬಿ.ಈ.ಜೆಯೇಂದ್ರ, ಜಿಲ್ಲಾಕಾಂಗ್ರೆಸ್ ಉಪಾಧ್ಯಕ್ಷೆ ರಾಜಮ್ಮ ರುದ್ರಯ್ಯ,ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಗೋವಿಂದರಾಜ್ ದಾಸ್, ತಾಲ್ಲೂಕು ಘಟಕದ ಅಧ್ಯಕ್ಷ ವೇದಕುಮಾರ್, ಜಂಟಿ ಕಾರ್ಯದರ್ಶಿ ಪವನಾ,ಮುಖಂಡರಾದಎಸ್.ಕೆ.ಈರಪ್ಪ,ಯಾಕೂಬ್,ರಂಗಸ್ವಾಮಿ,ಕಾಂತರಾಜ್ ಉಪಸ್ಥಿತರಿದ್ದರು.
Back to top button
error: Content is protected !!