ಕುಶಾಲನಗರ, ಜ 10: ಕುಶಾಲನಗರದ ನೇತಾಜಿ ಬಡಾವಣೆ ನಿವಾಸಿ ಪ್ಯಾರ ಮೆಡಿಕಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ನೇತಾಜಿ ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸ್ಥಳಕ್ಕೆ ಕುಶಾಲನಗರ ಟೌನ್ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈಕೆಯ ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Back to top button
error: Content is protected !!