ಕುಶಾಲನಗರ, ಜ 19: ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತ ರಿಗೆ ಕ್ರೀಡಾಕೂಟಗಳು ಸ್ಫೂರ್ತಿ ತುಂಬುತ್ತದೆ ಎಂದು ಕೊಡವ ಟಗ್ ಆಫ್ ವಾರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಪೊನ್ನೋಲತಂಡ ಕಿರಣ್ ಪೊನ್ನಪ್ಪ ಅಭಿಪ್ರಾಯಪಟ್ಟರು.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಂಭ್ರಮ ಹಿನ್ನೆಲೆ ಯಲ್ಲಿ ಆಯೋಜಿಸಿರುವ ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3ರ ಪ್ರಯುಕ್ತ ಬೇಗೂರು ಗ್ರಾಮದಲ್ಲಿರುವ ಕೇವ್ ರಿಟ್ಝ್ ರೆಸಾರ್ಟ್ ಅಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ಟ್ರೋಫಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯುತ್ತಿದೆ ಎನ್ನುವುದಕ್ಕೆ ವಿಶಿಷ್ಟ ರೀತಿಯಲ್ಲಿ ಟ್ರೋಫಿ ಅನಾವರಣ ಮಾಡಿರುವುದೇ ಸಾಕ್ಷಿ ಎಂದು ಬಣ್ಣಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪಾಲಿಬೆಟ್ಟ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಜನರಲ್ ಸರ್ಜನ್ ಡಾ. ಪಿ.ಎಸ್. ಲೋಹಿತ್ ಮಾತನಾಡಿ, ಕೌಟುಂಬಿಕ ಚೌಕಟ್ಟಿನೊಳಗೆ ಬದುಕುವುದರ ಜೊತೆಗೆ ಸಮಾಜಕ್ಕೆ ತುಡಿಯುವ ಪತ್ರಕರ್ತರ ಸೇವೆ ಅಭಿನಂದನಾರ್ಹ ಎಂದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಮಾತನಾಡಿ, ಕೊಡಗು ಪ್ರೆಸ್ ಕ್ಲಬ್ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಈ ಬಾರಿಯ ಕ್ರಿಕೆಟ್ ಪಂದ್ಯಾವಳಿ ಜಿಲ್ಲೆಯಲ್ಲಿ ದೊಡ್ಡ ಸದ್ದು ಮಾಡುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಈ ಹಿಂದಿನ 2 ವರ್ಷ ಯಶಸ್ವಿ ಯಾಗಿ ನಡೆದಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಭಾಗವಹಿಸುತ್ತಿದ್ದಾರೆ. ಈ ವರ್ಷವೂ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಕೇವ್ ರಿಟ್ಝ್ ರೆಸಾರ್ಟ್ ಮಾಲೀಕ ಕೋಳೆರ ಗೌರವ್ ಕಾರ್ಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಮುಳಿಯ ಜ್ಯುವೆಲ್ಸ್ ಮಡಿಕೇರಿ ಶಾಖಾ ವ್ಯವಸ್ಥಾಪಕ ತೀತಮಾಡ ಸೋಮಣ್ಣ ಟ್ರೋಫಿ ಅನಾವರಣ ಗೊಳಿಸಿದರು.
ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪದ ಖ್ಯಾತ ವಕೀಲ ಪ್ರದೀಪ್ ಕುಮಾರ್, ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವಿ.ವಿ. ಅರುಣ್ ಕುಮಾರ್ ಪಾಲ್ಗೊಂಡಿದ್ದರು.
ಕೆ.ಕೆ. ರೆಜಿತ್‌ಕುಮಾರ್ ಗುಹ್ಯ ನಿರೂಪಿಸಿದರು. ಚನ್ನನಾಯಕ್ ಪ್ರಾರ್ಥಿಸಿದರು. ಸುನಿಲ್ ಪೊನ್ನೇಟಿ ಸ್ವಾಗತಿಸಿದರು. ಎಂ.ಎನ್ ಚಂದ್ರಮೋಹನ್ ವಂದಿಸಿದರು.
Back to top button
error: Content is protected !!