ಕುಶಾಲನಗರ, ಜ 23: ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಾ 11ರಂದು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇಲ್ಲಿನ ಎಪಿಸಿಎಂಎಸ್ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿ ವರ್ಷದಂತೆ ಈ ಬಾರಿಯೂ ಸಮುದಾಯದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡಲಾಗುತ್ತಿದೆ.
ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.80ಕ್ಕಿಂತ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ
ಗೌರವಿಸಲಾಗುತ್ತದೆ.ಸಮುದಾಯದ ವಿದ್ಯಾರ್ಥಿಗಳು ಫೆ.10 ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಅಂಕಪಟ್ಟಿ , ಆಧಾರ್ ಕಾರ್ಡ್ ಜೆರಾಕ್ಸ್ ಹಾಗೂ ಎರಡು ಪೋಟೋ ಗಳನ್ನು ಕೈಬರಹದ ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಂಗವಾಗಿ ಸಮುದಾಯದ ಬಾಂಧವರಿಗೆ ಫೆ.25 ರಂದು ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು,ಸಮುದಸಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಮಹಾಸಭಾದ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ ಮಾತನಾಡಿ,ಜಿಲ್ಲೆಯಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಜಿ ಸ್ವೀಕಾರಕ್ಕೆ ಅವಕಾಶ ಮಾಡಲಾಗಿದೆ. ವಿರಾಜಪೇಟೆ ಸುರೇಶ್(9448108091),ಸೋವಾರಪೇಟೆ ಆದರ್ಶ (6362059199),ಕೊಡ್ಲಿಪೇಟೆ ಮೋಕ್ಷಿತ್ ರಾಜ್ (9880180055),ಮಮತಾ (9448567388),ರಾಜೇಶ್ವರ(94483825097),ಸೋಮವಾರಪೇಟೆ ಮಮತಾ (9448504652),ಕುಶಾಲನಗರ ಶಂಭಶಿವಮೂರ್ತಿ(9448336781), ಶನಿವಾರಸಂತೆ ಕಾಂತರಾಜು(7483411601) ಅವರಿಗೆ ವಿದ್ಯಾರ್ಥಿಗಳು ತಮ್ಮ ದಾಖಲೆಗಳ ಸಮೇತ ಅರ್ಜಿ ನೀಡಬೇಕು ಎಂದು ಕೋರಿದರು.
ಗೋಷ್ಠಿಯಲ್ಲಿ ಮಹಾಸಭಾದ ಖಜಾಂಚಿ ಎಚ್.ಪಿ.ಉದಯಕುಮಾರ್ ಇದ್ದರು.
Back to top button
error: Content is protected !!