ಕುಶಾಲನಗರ, ಜ 25: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು, ಕಾಳಿದೇವನ ಹೊಸೂರು, ಮದಲಾಪುರ ಸೀಗೆಹೊಸೂರು, ಮಾವಿನಹಳ್ಳ ವ್ಯಾಪ್ತಿಯಲ್ಲಿ ದಿನಂಪ್ರತಿ ಕಾಡಾನೆಗಳ ಹಾವಳಿಯಿಂದಾಗಿ ಬಾರಿ ಬೆಳೆ ನಷ್ಟ ಅನುಭವಿಸಿದ ಈ ಭಾಗದ ರೈತರು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಖುದ್ದಾಗಿ ಮನವಿಯನ್ನು ಸಲ್ಲಿಸಿ, ಸ್ಧಳ ಪರಿಶೀಲನೆ ನಡೆಸುವಂತೆ ಅಗ್ರಹ ಮಾಡಿದ್ದರು.
ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ, ಸಹಾಯಕ ಸಂರಕ್ಷಣಾ ಅಧಿಕಾರಿ ಗೋಪಾಲ್, ಸೋಮವಾರಪೇಟೆ ವಲಯ ಅರಣ್ಯ ಅಧಿಕಾರಿ ಚೇತನ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ್, ಆನೆಕಾಡು ಉಪ ವಲಯ ಅರಣ್ಯಾಧಿಕಾರಿ ಅನಿಲ್ ಡಿಸೋಜ, ಹುದುಗೂರು ವಲಯ ಅರಣ್ಯ ಅಧಿಕಾರಿ ಮನು ಸೇರಿದಂತೆ ಗ್ರಾಮಸ್ಥರು ಕಾಡಾನೆಗಳಿಂದ ಹಾನಿಯಾದ ವಿವಿಧ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರ ಅರ್ಜಿಗಳ ಅನುಗುಣವಾಗಿ ಪರಿಹಾರವನ್ನು ನೀಡುವುದರ ಜೊತೆಗೆ ಬೆಂಡೆಬೆಟ್ಟ ಮೀಸಲು ಅರಣ್ಯದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಸಮೀಪದ ದೊಡ್ಡ ಕಾಡಿಗೆ ಅಟ್ಟುವ ಕ್ರಮ ಕೈಗೊಳ್ಳಲು ಸಂಬಂಧಿಸಿದ ವಿಭಾಗದ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಹುದುಗೂರು ಗ್ರಾಮದ ಪ್ರಮುಖರಾದ ಉತ್ತಪ್ಪ, ರಘು, ಕುಶಾಲಪ್ಪ, ಜರ್ನಾಧನ್, ಗ್ರಾಮ ಪಂಚಾಯತಿ ಸದಸ್ಯೆ ರತ್ನಮ್ಮ ಸೇರಿದಂತೆ ಗ್ರಾಮಸ್ಥರು, ರೈತ ಹಿತರಕ್ಷಣಾ ಸಮಿತಿಯವರು, ಸಾರ್ವಜನಿಕರು ಹಾರಂಗಿ ನದಿಯನ್ನು ದಾಟಿಕೊಂಡು ಬರುವ ಕಾಡಾನೆಗಳಿಗೆ ಶಾಶ್ವತವಾದ ಪರಿಹಾರವನ್ನು ಕಲ್ಪಿಸುವ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
Back to top button
error: Content is protected !!