ಕಾರ್ಯಕ್ರಮ

ಗಂಗಾ ಕಲ್ಯಾಣ ಯೋಜನೆ ಸವಲತ್ತುಗಳ ಸದುಪಯೋಗಕ್ಕೆ ಶಾಸಕ ಅಪ್ಪಚ್ಚುರಂಜನ್ ಕರೆ

ಕುಶಾಲನಗರ ಫೆ 02: ತೊರೆನೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಇಲಾಖೆಯ ಯೋಜನೆಯ ವತಿಯಿಂದ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ 26 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಯ ಸಲಕರಣೆಗಳನ್ನು ವಿತರಣೆ ಮಾಡಲಾಯಿತು.

26 ಫಲಾನುಭವಿಗಳಿಗೆ ರೂ 65 ಲಕ್ಷ ಮೊತ್ತದ ಹಣದಲ್ಲಿ ಫಲಾನುಭವಿಯೊಬ್ಬರಿಗೆ ರೂ ಎರಡೂವರೇ ಲಕ್ಷ ರೂ ಮೊತ್ತದ ಪೈಪ್ ಮತ್ತು ಇತರೆ ಸಲಕರಣೆಗಳನ್ನು ಶಾಸಕ ಅಪ್ಪಚ್ಚುರಂಜನ್ ವಿತರಣೆ ಮಾಡಿದರು.

ನಂತರ ಮಾತನಾಡಿದ ಅವರು, ಇದರ ಸಮರ್ಪಕವಾದ ಬಳಕೆಯನ್ನು ಮಾಡಿಕೊಂಡು ಉತ್ತಮವಾದ ಬೇಸಾಯ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ಕರೆ ನೀಡಿದರು.

ಕೃಷಿ, ಹೈನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಯೋಜನೆಗಳ ಮೂಲಕ ಹಸು ,ಕುರಿ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗಿದೆ.ಮುಂದಿನ ದಿನಗಳಲ್ಲಿ ‌ಗಿರಿಜನ ಅಭಿವೃದ್ಧಿಗೆ ಅನುಕೂಲವಾಗುವ ದೃಷ್ಟಿಯಿಂದ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕುರುಬ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಭಾಕರ್ ಮಾತನಾಡಿ, ಈಗಾಗಲೇ ಶಾಸಕರ ಅನುಮೋದನೆ ಮೇರೆಗೆ ಗಿರಿಜನ ಕುಟುಂಬದವರಿಗೆ ಎಲ್ಲಾ ಸೌಲಭ್ಯಗಳು ದೊರೆಯುತ್ತಿವೆ. ಮುಂದಿನ ದಿನಗಳಲ್ಲಿ ರಾಜ್ಯ ಕುರಿ ಮಂಡಳಿಯ ನಿಗಮದ ಅಡಿಯಲ್ಲಿ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಕುರಿ ಮತ್ತು ಉಣ್ಣೆ ಸಹಕಾರ ಸಂಘವನ್ನು ತೆರೆಯುವ ಎಲ್ಲಾ ಸಿದ್ದತೆಗಳ ನಡೆದಿವೆ. ಜಿಲ್ಲೆಯ ಎಲ್ಲಾ ಗಿರಿಜನರ ಸಹಕಾರದೊಂದಿಗೆ ಸಹಕಾರ ಸಂಘದ ಮೂಲಕ ಸಾಲ ಸೌಲಭ್ಯಗಳನ್ನು ನೀಡುವುದರ ಮೂಲಕ ಆರ್ಥಿಕ ಮಟ್ಟವನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ ಮಹೇಶ್ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬೇಬಿಯಣ್ಣ ಸದಸ್ಯರಾದ ದೇವರಾಜ್, ಶಿವಕುಮಾರ್, ಪ್ರಕಾಶ್, ಯಶೋದ, ಬಸವನಹಳ್ಳಿ ಸಹಕಾರ ಸಂಘದ ನಿರ್ದೇಶಕ ಉದಯಕುಮಾರ್,ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅಧಿಕಾರಿ ಚಂದ್ರಶೇಖರ್, ಸೇರಿದಂತೆ ಫಲಾನುಭವಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!