ಕುಶಾಲನಗರ, ಫೆ 15:
ಹೆಬ್ಬಾಲೆ ಗ್ರಾಮದಲ್ಲಿ ಬುಧವಾರ ಸಂತೆಯ ದಿನ ಬಿ.ಜೆ.ಪಿ.ಯ ಬೂತ್ ಸಮಿತಿಯ ವತಿಯಿಂದ ಕೂಡುಮಂಗಳೂರು ಪಂಚಾಯತಿಯ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಮತ್ತು ಅರುಣ ಕುಮಾರಿ ನೇತೃತ್ವದಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಸಂತೆಯ ಗ್ರಾಹಕರು ಮತ್ತು ವ್ಯಾಪಾರಸ್ಥರಿಗೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿನ ಹಲವು ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆ ಕರಪತ್ರಗಳನ್ನು ನೀಡುವ ಮೂಲಕ ಮನವರಕೆ ಮಾಡಿಕೊಟ್ಟರು. ಈ ಕುರಿತು ಮಾತನಾಡಿದ ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಬುದುವಾರ ಬೆಳಿಗ್ಗೆಯಿಂದಲೇ ಹೆಬ್ಬಾಲೆ ಭಾಗದಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರಿಗೆ ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಜನಪರ ಮಹತ್ತರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರಪತ್ರಗಳ ಮೂಲಕ ಮನವರಿಕೆ ಮಾಡಿಕೊಡಲಾಗುತ್ತಿದೆ. ಅಲ್ಲದೆ ಸ್ಥಳೀಯ ಶಾಸಕ ಎಂ ಪಿ ಅಪ್ಪಚ್ಚುರಂಜನ್ ರವರು ಕೈಗೊಂಡಂತಹ ಹಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಳಮಟ್ಟದಿಂದ ಸಾರ್ವಜನಿಕರಿಗೆ ತಿಳಿಯಪಡಿಸಲಾಗುತ್ತಿದೆ. ಸಮಿತಿಯ ವತಿಯಿಂದ ಮುಂದಿನ ದಿನಗಳಲ್ಲಿ ಮನೆಮನೆಗೂತೆರಳಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಮಹತ್ತರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಯು ವಿಜಯಶಾಲಿಯಾಗಲು ಬೇಕಾದಂತಹ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದಾಗಿ ಇದೇ ಸಂದರ್ಭ ತಿಳಿಸಿದರು. ಈ ಸಂದರ್ಭ ಹೆಬ್ಬಾಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅರುಣ ಕುಮಾರಿ. ಸದಸ್ಯರಾದ ಪರಮೇಶ. ಲತಾ. ರತ್ನಮ್ಮ. ಬೂತ್ ಸಮಿತಿಯ ಅಧ್ಯಕ್ಷರಾದ ರವಿ. ಸಂತೋಷ್. ಸೇರಿದಂತೆ ಇನ್ನಿತರರು ಹಾಜರಿದ್ದರು…
Back to top button
error: Content is protected !!