ಕುಶಾಲನಗರ, ಫೆ 23: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಸರ್ವೆ ನಂಬರ್ 14 ರಲ್ಲಿ 4 ಎಕರೆ ಜಾಗವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಾಯ್ದಿರಿಸಲಾಗಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ.ಅಪ್ಪಚ್ಚು ರಂಜನ್ ಅವರ ಪ್ರಯತ್ನದಿಂದಾಗಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಮಾಸಿಕ ಸಭೆಯ ನಡಾವಳಿಯಂತೆ ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಕಾಳಜಿಯಿಂದ ತಾಲ್ಲೂಕು ಪಂಚಾಯತಿ ಪ್ರಸ್ತಾವನೆ ಮೂಲಕ ಅನೇಕ ವರ್ಷಗಳಿಂದ ಬಾಕಿ ಇದ್ದ ಪೈಸಾರಿ ಜಾಗವನ್ನು ಕಂದಾಯ ಇಲಾಖೆಯ ಕಾಯ್ದೆಯ ಅನುಗುಣವಾಗಿ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನವನ್ನು ನೀಡುವ ಉದ್ದೇಶಕ್ಕೆ ಸೋಮವಾರಪೇಟೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳ ಹೆಸರಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 71 ರನ್ವಯ ಕಾಯ್ದಿರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಸರ್ವೆ ನಂಬರ್ 14 ರಲ್ಲಿ 4 ಎಕರೆ ಜಾಗವನ್ನು ಕಂದಾಯ ಇಲಾಖೆಯ ಸೂಚನೆಯಂತೆ ಭೂಮಾಪನ ಇಲಾಖೆಯ ಸಹಯೋಗದೊಂದಿಗೆ ಸ್ಧಳ ಪರಿಶೀಲನೆ ನಡೆಸಿ ಜಾಗವನ್ನು ಗುರುತಿಸಿ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್ ಮತ್ತು ಆಯಾ ವ್ಯಾಪ್ತಿಯ ಸದಸ್ಯರ ಸಮ್ಮುಖದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರಿಗೆ ಸರ್ವೆ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕುಶಾಲನಗರ ಕಂದಾಯ ನಿರೀಕ್ಷಕ ಸಂತೋಷ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಭೂ ಮಾಪನ ಇಲಾಖೆಯ ಅಧಿಕಾರಿ ವೆಂಕಟೇಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯರಾದ ದಿನೇಶ್, ಭಾಗ್ಯ, ಪಾರ್ವತಮ್ಮ, ಖತಿಜ, ಗ್ರಾಮಸ್ಥರಾದ ರಾಮೇಗೌಡ ,ಹರ್ಷ, ದಿಲೀಪ್, ಮಂಜುನಾಥ್ ಮತ್ತಿತರರು ಹಾಜರಿದ್ದರು.
Back to top button
error: Content is protected !!