ಕುಶಾಲನಗರ, ಫೆ 28 ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ- ಮನೆಗೆ ತೆರಳಿ ಚಿನ್ನಾಭರಣಗಳನ್ನು ಪಾಲಿಶ್ ಮಾಡುವುದಾಗಿ ಸಾರ್ವಜನಿಕರನ್ನು ನಂಬಿಸಿ ವಂಚಿಸುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮನೆ-ಮನೆಗೆ ತೆರಳಿ ಚಿನ್ನಾಭರಣಗಳನ್ನು ಪಾಲಿಶ್ ಮಾಡುವುದಾಗಿ ನಂಬಿಸಿ ಚಿನ್ನಾಭರಣಗಳನ್ನು ಪಡೆದು ಪಾಲಿಶ್ ಮಾಡುವ ನೆಪದಲ್ಲಿ ಪಾಲಿಶ್ ಸಾಮಾಗಿ ಹಾಗೂ ಆ್ಯಸಿಡ್ ಬಳಸಿ ಸಲ್ಪಮಟ್ಟಿನ ಚಿನ್ನವನ್ನು ಕರಗಿಸಿ ಮೋಸ ಮಾಡುತ್ತಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕುಶಾಲನಗರ ಪೊಲೀಸರ ತಂಡ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹೆಬ್ಬಾಲೆ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿಗಳಾದ ಮೂಲತಃ ಬಿಹಾರ ರಾಜ್ಯದವರಾದ ರಾಜಕುಮಾರ (29), ಪ್ರವೀಣ್ ಕುಮಾರ್ (32), ಲಲನ್ ಕುಮಾರ್ (26) ಎಂಬವರುಗಳನ್ನು ಬಂಧಿಸಿ 15 ಗ್ರಾಂ ಚಿನ್ನ ಹಾಗೂ ಪಾಲಿಶ್ ಮಾಡಲು ಬಳಸುತ್ತಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲಾಗಿದೆ.
ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್ ಬಿ.ಜಿ, ಠಾಣಾಧಿಕಾರಿಗಳಾದ ಪುನೀತ್.ಡಿ.ಎಸ್, ದಿನೇಶ್ ಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿತು. ಮನೆ-ಮನೆಗೆ ಆಗಮಿಸಿ ಚಿನ್ನಾಭರಣಗಳನ್ನು ಪಾಲಿಶ್ ಮಾಡುವುದಾಗಿ ಬರುವ ವ್ಯಕ್ತಿಗಳನ್ನು ನಂಬದೇ ಪಾಲಿಶ್ ಹಾಗೂ ಇತರೆ ಕಾರ್ಯಗಳಿಗೆ ಸ್ಥಳೀಯ ಅಧೀಕೃತ ಜುವೆಲರಿ ಅಂಗಡಿಗಳಲ್ಲಿ ಮಾಡಿಸುವಂತೆ ಕೋರಿರುವ ಪೊಲೀಸರು ಚಿನ್ನಾಭರಣಗಳನ್ನು ಪಡೆದು ಪಾಲಿಶ್ ಮಾಡುವ ನೆಪದಲ್ಲಿ ಚಿನ್ನ ಕರಗಿಸಿ ವಂಚಿಸುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ಈ ಮೂಲಕ ಕೋರಿದ್ದಾರೆ.
Back to top button
error: Content is protected !!