ಕಾರ್ಯಕ್ರಮ

ಕುಶಾಲನಗರದ ನಾಮಧಾರಿ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ.

ಕುಶಾಲನಗರ, ಮಾ 06: ಕುಶಾಲನಗರದ ನಾಮಧಾರಿ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಹೆಚ್. ಹೆಚ್.ಪ್ರಕಾಶ್ ಅಧ್ಯಕ್ಷತೆಯಲ್ಲಿ ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮೈಸೂರು ಕೇಂದ್ರ ವಲಯದ ಅಧ್ಯಕ್ಷ ಎಂ. ಎಸ್. ಸೋಮಶೇಖರ್ ನೆರವೇರಿಸಿದರು. ಸಮುದಾಯದ ಸಂಘಟನೆಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲು ವಾರ್ಷಿಕ ಮಹಾ ಸಭೆಯಲ್ಲಿ ತಿಳಿಸಿದರು. ಮುಂದಿನ ದಿನಗಳಲ್ಲಿ ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಿಧ್ಯಾರ್ಥಿಗಳ ವಸತಿ ನಿಲಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಸಂಬಂಧ ಕಾರ್ಯಕ್ರಮಗಳನ್ನು ಹಮ್ಮಿಕಿಳ್ಳುವ ಬಗ್ಗೆ ಚರ್ಚಿಸಲಾಯಿತು.
ಕುಶಾಲನಗರ ನಾಮಧಾರಿ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಹೆಚ್.ಎಸ್.ಅಶೋಕ್ ಮಾತನಾಡಿ, ಜಿಲ್ಲೆಯಲ್ಲಿ ಸಮುದಾಯಕ್ಕೆ ಸಂಬಂಧಿಸಿದಂತೆ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿಧ್ಯಾರ್ಥಿಗಳ ವಸತಿ ನಿಲಯವನ್ನು ಕುಶಾಲನಗರ ವ್ಯಾಪ್ತಿಯಲ್ಲಿ ತೆರೆಯುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ವಾರ್ಷಿಕ ಮಹಾಸಭೆಯ ಅಂಗವಾಗಿ ಸಮುದಾಯದ ಸದಸ್ಯರಿಗೆ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯ ಬಾಂಧವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಕಾರ್ಯದರ್ಶಿ ಬಿ.ಎಸ್. ನಾಗರಾಜ್ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು.
ವೇದಿಕೆಯಲ್ಲಿ ಕೆ.ಆರ್. ನಗರ ವಲಯದ ಪ್ರಮುಖ ಕೆ.ಆರ್. ಅಶೋಕ್ ಕುಮಾರ್, ಹೆಚ್.ಡಿ. ಕೋಟೆ ವಲಯದ ಎಂ.ಎಸ್. ಭೀಮರಾಜ್, ಪಿರಿಯಾಪಟ್ಟಣದ ಎಸ್.ಕೆ.ಲಕ್ಷೇಗೌಡ್ರು, ಹಾಸನ ವಲಯದ ರವಿಶಂಕರ್ ಸೇರಿದಂತೆ ವಿವಿಧ ವಲಯ ಅಧ್ಯಕ್ಷರು, ಕುಶಾಲನಗರ ಸಂಘದ ಉಪಾಧ್ಯಕ್ಷ ವಿ.ಜಿ.ದಿನೇಶ್, ಕಾರ್ಯದರ್ಶಿ ನಾಗರಾಜ್, ಜಂಟಿ ಕಾರ್ಯದರ್ಶಿ ಬಿ.ಎನ್.ಸಂತೋಷ ಕುಮಾರ್, ಸೇರಿದಂತೆ ಸಂಘದ ನಿರ್ದೇಶಕರು ಹಾಗೂ ಕುಶಾಲನಗರದ ವಲಯದ ಸಮುದಾಯದ ಸದಸ್ಯರು ಭಾಗವಹಿಸಿದ್ದರು. ನಂತರ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related Articles

Leave a Reply

Your email address will not be published. Required fields are marked *

Back to top button
error: Content is protected !!