ಕುಶಾಲನಗರ, ಮಾ 13: ಭಾರತೀಯ ಜನತಾ ಪಾರ್ಟಿ ಕೊಡಗು ಜಿಲ್ಲಾ ಯುವ ಮೋರ್ಚಾ ಆಶ್ರಯದಲ್ಲಿ ಸೋಮವಾರಪೇಟೆ ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಯುವ ಶಕ್ತಿ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಯುವ ಮೋರ್ಚಾದ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಉದ್ಘಾಟಿಸಿದರು.
ಶಾಸಕರಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂಎಲ್ಸಿ ಸುಜಾ ಕುಶಾಲಪ್ಪ, ಕೊಡಗು ಜಿಲ್ಲಾ ಯುವಮೋರ್ಚಾದ ಅಧ್ಯಕ್ಷ ದರ್ಶನ್ ಜೋಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ದ.ಕ.ಪ್ರಭಾರಿ ಬಿ.ಬಿ.ಭಾರತೀಶ್, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಸೇರಿದಂತೆ ಪ್ರಮುಖರಾದ ಜೈಶಂಕರ್, ಮಹೇಶ್ ತಿಮ್ಮಯ್ಯ, ವಿ.ಕೆ.ಲೋಕೇಶ್, ರೂಪಾ ಸತೀಶ್, ಚಂದ್ರಶೇಖರ್, ಕವನ್ ಕಾವೇರಪ್ಪ, ನವೀನ್ ಪೂಜಾರಿ, ಹೇಮಂತ್ ತೋರೇರ ಮತ್ತಿತರರು ಇದ್ದರು.
ಕೊಡಗು ಜಿಲ್ಲೆಯಾದ್ಯಂತ 2000 ಕ್ಕೂ ಅಧಿಕ ಬೈಕ್ ಗಳಲ್ಲಿ ಕಾರ್ಯಕರ್ತರು ಸೋಮವಾರಪೇಟೆ ಗೆ ಮೆರವಣಿಗೆ ಸಾಗಿದರು.
Back to top button
error: Content is protected !!