ಕಾಮಗಾರಿ

ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಂಡ ರಸ್ತೆ ಕಾಮಗಾರಿ ಪರಿಶೀಲನೆ

ಕುಶಾಲನಗರ, ಅ 06: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ಪಟ್ಲಮಂಟಿ ಭಾಗದಲ್ಲಿರುವ  ಉಮೇಶ್‌, ಚಂದ್ರಶೇಖರ್‌, ಶಾಂತಿ ರವರ ಮನೆಯ ಕಡೆಗೆ ಹಾದು ಹೋಗುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಅಂದಾಜು ರೂ.3.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸದರಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ  ಸಿ ಎಲ್‌ ವಿಶ್ವ ರವರು ಮತ್ತು ಉಪಾಧ್ಯಕ್ಷೆ ಕುಸುಮ ಪಿ ಎನ್ ಹಾಗೂ ಗ್ರಾ.ಪಂ. ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!