ಕುಶಾಲನಗರ, ಸೆ.23:
ಕುಶಾಲನಗರ ಮಾಜಿ ಸೈನಿಕರ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭ ಸೆ. 28 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕ್ಯಾಪ್ಟನ್ ಡಿ.ಕೆ. ಚಿಣ್ಣಪ್ಪ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, 28 ರಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರ ಗೌಡ ಸಮಾಜದಲ್ಲಿ ಸಂಘದ ಕಟ್ಟಡ ಸ್ಥಳ ದಾನಿಗಳಾದ ನಾಯಕ್ ಕೆದಂಬಾಡಿ ಸಣ್ಣಪ್ಪ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಕ್ಯಾಪ್ಟನ್ ಡಿ.ಕೆ. ಚಿಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇಜರ್ ಜನರಲ್ ಬಿ.ಎ ಕಾರ್ಯಪ್ಪ, ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಕರ್ನಲ್ ನಾರಾಯಣ ಮೂರ್ತಿ, ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಮೇಜರ್ ಚಿಂಗಪ್ಪ ಸುಂಟಿಕೊಪ್ಪ ಠಾಣಾಧಿಕಾರಿ ಎಂ ಸಿ ಶ್ರೀಧರ್, ಮಡಿಕೇರಿಯ ಗ್ರೂಪ್ ಕ್ಯಾಪ್ಟನ್ ಕೆ.ಎ. ಕಾರ್ಯಪ್ಪ ಅವರು ಪಾಲ್ಗೊಳ್ಳುವರು.
ಸಂಘದ ಕಟ್ಟಡದ ಸ್ಥಳದಾನಿಗಳಿಗೆ ಹಾಗೂ ಸಂಘದ ಸಂಸ್ಥಾಪಕರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಂಘದ ಉಪಾಧ್ಯಕ್ಷ ಮನು ನಂಜುಂಡ ಅವರು ಮಾತನಾಡಿ, ಬೆಳ್ಳಿಹಬ್ಬ ಅಂಗವಾಗಿ 24 ರಂದು ಭಾನುವಾರ ಸಂಘದ ಸದಸ್ಯರಿಗೆ ಮತ್ತು ಕುಟುಂಬ ಸದಸ್ಯರಿಗೆ ಕುಶಾಲನಗರ ಮುಳ್ಳುಸೋಗೆ ಸರಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಬೆಳ್ಳಿ ಹಬ್ಬದ ಆಚರಣೆ ಪ್ರಯುಕ್ತ ಕುಶಾಲನಗರ ಗೌಡ ಸಮಾಜದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮತ್ತು ಕುಟುಂಬ ಸದಸ್ಯರಿಗೆ ಹಾಗೂ ಸಂಘದ ಮೃತಪಟ್ಟ ಸದಸ್ಯರ ಪತ್ನಿಯರಿಗೆ ಭೋಜನ ಕೂಟ ಏರ್ಪಡಿಸಲಾಗಿದೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಸ್.ಆರ್. ಮಾದಪ್ಪ, ಖಜಾಂಚಿ ನರೇಶ್ ಕುಮಾರ್ ಇದ್ದರು.
Back to top button
error: Content is protected !!