ಕುಶಾಲನಗರ ಏ 1: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕಾನೂನಿನ ವಿಷಯಗಳ ಬಗ್ಗೆ ಅರಿತುಕೊಂಡಲ್ಲಿ ಸಂಭಾವ್ಯ ಅನಾಹುತಗಳನ್ನು ತಡೆಯಲು, ಪರಿಹರಿಸಲು ಸಹಕಾರಿಯಾಗಲಿದೆ ಎಂದು ಸೋಮವಾರಪೇಟೆ ಉಪ ವಿಭಾಗದ ಉಪ ಪೋಲೀಸ್ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಸಲಹೆ ನೀಡಿದರು.
ನಂಜರಾಯಪಟ್ಟಣ ಪ್ರೌಢಶಾಲೆಯಲ್ಲಿ ಕುಶಾಲನಗರದ ಮಹಾತ್ಮ ಗಾಂಧಿ ಸ್ಮಾರಕ ಪದವಿ ಕಾಲೇಜು ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಕಾನೂನು ಅರಿವು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೂಡಿಗೆ ಪದವಿಪೂರ್ವ ಕಾಲೇಜು ಉಪಾಧ್ಯಕ್ಷ ಕೆ. ಕೆ. ನಾಗರಾಜಶೆಟ್ಟಿ ಮಾತನಾಡಿ, ಎನ್.ಎಸ್.ಎಸ್ ಶಿಬಿರ ಭವಿಷ್ಯದಲ್ಲಿ ವಿದ್ಯಾರ್ಥಿಗಳನ್ನು ಉತ್ತಮ ನಾಗರೀಕರಾಗಿಸುವ ಗುಣಗಳನ್ನು ಬೆಳೆಸುತ್ತವೆ. ಬದುಕಿನ ಮೌಲ್ಯಗಳು ಸೇವಾ ಮನೋಭಾವ ಮೂಡಿಸಲು ಸಹಕಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಧೀಕ್ಷಕ ಎಸ್. ಬಿ. ಮಹೇಶ್ ವಹಿಸಿದ್ದರು.
ವೇದಿಕೆಯಲ್ಲಿ ನಂಜರಾಯಪಟ್ಟಣ ವಿದ್ಯಾ ಸಂಘದ ಪಿ .ಬಿ.ಅಶೋಕ್, ನಂಜರಾಯಪಟ್ಟಣ ಉಪ ವಲಯ ಅರಣ್ಯ ಅಧಿಕಾರಿ ಸುಬ್ರಾಯ, ಕಾಲೇಜು ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ, ಪದವಿ ಕಾಲೇಜು ಪ್ರಾಂಶುಪಾಲೆ ಟಿ.ಎ.ಲಿಖಿತ, ಶಿಬಿರಾಧಿಕಾರಿ ಮಂಜೇಶ್, ದಿನೇಶ್ ಕುಮಾರ್, ಬಿಂದು, ಮಮ್ತಾಜ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.
Back to top button
error: Content is protected !!