ಕುಶಾಲನಗರ, ಏ 19:ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಂಡ ಪ್ರಕ್ರಿಯಾ ಸಂಹಿತ 1973ರ ಕಲಂ 144 ರಡಿ ಕೊಡಗು ಜಿಲ್ಲೆಯ ಸಿದ್ದಾಪುರ ನಗರ, ವಾಲ್ನೂರು ಗ್ರಾಮ, ಅರೆಕಾಡು ಗ್ರಾಮ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂಜಾಗೃತ ಕ್ರಮವಾಗಿ ಶುಕ್ರವಾರ (ಏ. 19) ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರತಕ್ಕದಲ್ಲ. ಪ್ರತಿಭಟನೆ, ಮೆರವಣಿಗೆ, ರ್ಯಾ ಲಿ, ಜಾಥಾ, ರಸ್ತೆ ತಡೆ, ಪ್ರಚೋದಾನಾತ್ಮಕ ಹೇಳಿಕೆ, ಘೋಷಣೆ ಕೂಗತಕ್ಕದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Back to top button
error: Content is protected !!