ಕುಶಾಲನಗರ, ಏ 09:ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಂಥರ್ ಗೌಡ 17 ರಂದು ನಾಮಪತ್ರ ಸಲ್ಲಿಸುತ್ತಾರೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕೊಡಗು ಜಿಲ್ಲೆಯ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಅನೇಕ ಕಾರ್ಯಕರ್ತರಿಗೆ ಈಗ ಮಂಥರ್ ಗೌಡ ಕಾಂಗ್ರೆಸ್ ನ ಹವಾ ನಿರ್ಮಾಣ ಮಾಡಿದ್ದಾರೆ. ಅಂತಹ ಒಬ್ಬ ಸಮರ್ಥ ಅಭ್ಯರ್ಥಿಯನ್ನು ಗುರುತಿಸಿ ಸ್ಪರ್ಧೆಗೆ ಅವಕಾಶ ನೀಡಿರುವುದನ್ನು ಸ್ವಾಗತಿಸುತ್ತಿದ್ದೇವೆ ಎಂದು ವಿ.ಪಿ.ಶಶಿಧರ್ ಹೇಳಿದರು.
ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದ ಕೆ.ಪಿ.ಚಂದ್ರಕಲಾ ಮಾತನಾಡಿ, ಮಂಥರ್ ಗೌಡ ಅವರಿಗೆ ಟಿಕೇಟ್ ನೀಡಿರುವ ಬಗ್ಗೆ ಯಾವುದೇ ಆಕ್ಷೇಪವಿಲ್ಲ, ಮನಃಪೂರ್ವಕವಾಗಿ ಬೆಂಬಲಿಸುತ್ತೇವೆ ಎಂದರು. ಯುವಜನಾಂಗವನ್ನು ಪಕ್ಷಾತೀತವಾಗಿ ಸೆಳೆಯುತ್ತಿರುವ ಮಂಥರ್ ಗೌಡ ಅವರ ಆಯ್ಕೆಯನ್ನು ನಾನು ಸ್ವಾಗತಿಸುತ್ತೇನೆ. ಈಗ ಬದಲಾದ ಸನ್ನಿವೇಶದಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಏಕೈಕ ಉದ್ದೇಶದಿಂದ ಈಗ ಮಂಥರ್ ಗೌಡ ಅವರನ್ನು ಗೆಲ್ಲಿಸುವ ಭರವಸೆ ಹೊಂದಿದ್ದೇವೆ. ಖಂಡಿತ ಈ ಬಾರಿ ಗೆಲುವು ನಿಶ್ಚಿತ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಟಿಕೇಟ್ ಘೋಷಣೆಯಾದ ನಂತರ ಕೆಲವು ಟಿಕೆಟ್ ಆಕಾಂಕ್ಷಿಗಳು ಅಸಾಮಾಧಾನಗೊಂಡಿದ್ದಾರೆ. ಅಂತಹ ನಾಯಕರುಗಳೊಂದಿಗೆ ಹಿರಿಯ ನಾಯಕರನ್ನು ಸಮಾಧಾನಪಡಿಸಿ ಜಿಲ್ಲೆಯ ಎಲ್ಲಾರೂ ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲುಸುವುದಾಗಿ ಮಡಿಕೇರಿ ಕ್ಷೇತ್ರ ಚುನಾವಣಾ ಉಸ್ತುವಾರಿ ಬಿ.ಜಿ.ಮಂಜುನಾಥ್ ತಿಳಿಸಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಗರಧ್ಯಾಕ್ಷ ಪ್ರಮೋದ್ ಮುತ್ತಪ್ಪ, ಡಿಸಿಸಿ ಸದಸ್ಯ ಅಬ್ದುಲ್ ಖಾದರ್, ಕುಶಾಲನಗರ ಮಾಜಿ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಉಪಸ್ಥಿತರಿದ್ದರು.
Back to top button
error: Content is protected !!