ಸುದ್ದಿಗೋಷ್ಠಿ

ಕುಶಾಲನಗರ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಳಶೋತ್ಸವ ಅಂಗವಾಗಿ ಜ:2 ರಿಂದ ವಾಸವಿ ಸಪ್ತಾಹ

ಕುಶಾಲನಗರ, ಡಿ 29: ಕುಶಾಲನಗರ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಳಶೋತ್ಸವ ಅಂಗವಾಗಿ ಜನವರಿ 2 ರಿಂದ ವಾಸವಿ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಜನವರಿ 2ರಂದು ಸಾರ್ವಜನಿಕರಿಗೆ ಕುಶಾಲನಗರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತ ದಾನ ಶಿಬಿರ ಏರ್ಪಡಿಸಲಾಗಿದೆ ಎಂದು ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ಬಿ. ಆರ್. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಅವರು ಕುಶಾಲನಗರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಾಸವಿ ಸಪ್ತಾಹ ಅಂಗವಾಗಿ ಏಳು ದಿನಗಳ ಕಾಲ ಕುಶಾಲನಗರ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಉಚಿತ ಆರೋಗ್ಯ ತಪಾಸಣಾ ಶಿಬಿರ ಕೊಡಗು ಜಿಲ್ಲಾ ವೇದಿಕೆಯ ವಿಜ್ಞಾನಗಳ ಸಂಸ್ಥೆ ಮತ್ತು ಕೊಡಗು ಜಿಲ್ಲಾ ರಕ್ತ ನಿಧಿ ಕೇಂದ್ರ ವಾಸವಿ ಯೋಜನೆ ಸಂಘದ ಸಹಯೋಗದೊಂದಿಗೆ ನಡೆಯುತ್ತಿದ್ದು ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ ಶಸ್ತ್ರಚಿಕಿತ್ಸಾ ವಿಭಾಗ ನೇತ್ರ ತಪಾಸಣೆ ದಂತ ಶಾಸ್ತ್ರ ವಿಭಾಗ ಸೇರಿದಂತೆ ಹಲವು ರೋಗಗಳ ತಜ್ಞರು ಮತ್ತು ಸಿಬ್ಬಂದಿಗಳು ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಸಂಬಂಧಿಸಿದ ರೋಗಗಳಿಗೆ ಉಚಿತವಾಗಿ ಔಷಧಿ ಮಾತ್ರೆಗಳನ್ನು ಕೂಡ ನೀಡಲಾಗುತ್ತದೆ ಎಂದರು. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಶಿಬಿರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮತ್ತು ಅಂಗವಿಕಲರ ಕಾರ್ಡ್ ಮಾಡಿಕೊಡಲಾಗುತ್ತದೆ. ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ತನಕ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದರು. ಶಿಬಿರಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಮತ್ತು ಒಂದು ಭಾವಚಿತ್ರವನ್ನು ಈ ಸಂದರ್ಭ ತಮ್ಮೊಂದಿಗೆ ತರುವುದು.

ಇದರೊಂದಿಗೆ ಜನವರಿ ಎರಡರಂದು ಮಾದಕ ವ್ಯಸನ ಮುಕ್ತ ಸಮಾಜ ಬಗ್ಗೆ ಜಾಗೃತಿ ಮೂಡಿಸುವ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಬಳಿಯಿಂದ ಕುಶಾಲನಗರ ಗಣಪತಿ ದೇವಾಲಯ ತನಕ ವಾಕಥಾನ್ ಜೊತೆಗೆ ಸೈಕಲ್ ಜಾಥಾ ನಡೆಯುವುದು.
3 ರಂದು ಸಂಜೆ 4 ಗಂಟೆಗೆ ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ 181ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ.
ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಯದುವೀರ್ ಒಡೆಯರ್ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತಿತರರು ಪಾಲ್ಗೊಳ್ಳುವರು.
ನಾಲ್ಕನೇ ತಾರೀಖಿನಂದು ವಾಸವಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದ್ದು ಇದರಲ್ಲಿ ಈಗಾಗಲೇ 65 ತಂಡಗಳು ನೊಂದಾಯಿಸಿಕೊಂಡಿವೆ ಎಂದು ತಿಳಿಸಿದರು.
ಜನವರಿ 5ರಂದು ಕಾವೇರಿ ನದಿ ತೀರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಲಕ್ಷ-ವೃಕ್ಷ ಯೋಜನೆಗೆ ಚಾಲನೆ ನೀಡಲಾಗುತ್ತದೆ.
6 ರಂದು ಶಾಲಾ-ಕಾಲೇಜು ಮಕ್ಕಳಿಗೆ ಸೈಬರ್ ಅಪರಾಧದ ಬಗ್ಗೆ ಮಾಹಿತಿ ಜಾಗೃತಿ ಶಿಬಿರ ನಡೆಯುವುದು. ಉದ್ಯೋಗಗಳ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿರುವ ಅವರು ಆರೋಗ್ಯ ಶಿಬಿರ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಹೆಚ್ಚಿನ ಮಾಹಿತಿಗಾಗಿ ಕುಶಾಲನಗರ ಆರ್ಯವೈಶ್ಯ ಮಂಡಳಿ ಕಾರ್ಯದರ್ಶಿ ಕೆ ಪ್ರವೀಣ್ ದೂರವಾಣಿ ಸಂಖ್ಯೆ 9141866866, ಅಥವಾ ವಾಸವಿ ಸಪ್ತಾಹದ ಯೋಜನಾ ನಿರ್ದೇಶಕರಾದ ಎ ಎಸ್ ಕುಮಾರ್ 9448072026 ಸಂಪರ್ಕಿಸುವಂತೆ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆರ್ಯವೈಶ್ಯ ಮಂಡಳಿ ಉಪಾಧ್ಯಕ್ಷರಾದ ಬಿ ಎಲ್ ಅಶೋಕ್ ಕುಮಾರ್ ಕಾರ್ಯದರ್ಶಿ ಕೆ ಪ್ರವೀಣ್ ಖಜಾಂಚಿ ಪಿ ಎಸ್ ಪ್ರಶಾಂತ್, ನಿರ್ದೇಶಕರಾದ ಕೆ ಜೆ ಸತೀಶ್ ಬಿ ಆರ್ ನಟರಾಜ ಇದ್ದರು.

ಚಿತ್ರ ಸುದ್ದಿಗೋಷ್ಠಿ ಸಂದರ್ಭ

Related Articles

Leave a Reply

Your email address will not be published. Required fields are marked *

Back to top button
error: Content is protected !!