ಕುಶಾಲನಗರ,ಮೇ 25:ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ನಶಾ ಮುಕ್ತ ಕೊಡಗು ಅಭಿಯಾನ ಹಾಗೂ ವಿಶ್ವ ತಂಬಾಕು ರಹಿತ ದಿನಾಚರಣೆ ಆಚರಿಸಲಾಯಿತು. ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಡಿವೈಎಸ್ಪಿ ಗಂಗಾಧರಪ್ಪ ಚಾಲನೆ ನೀಡಿದರು.ಅನುಗ್ರಹ ಪದವಿ ಕಾಲೇಜಿನ ವಿದ್ಯಾರ್ಥಿಗಳು ತಂಬಾಕು ದುಷ್ಪರಿಣಾಮಗಳ ಬಗ್ಗೆ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಕಾರು ನಿಲ್ದಾಣದಲ್ಲಿ ಕಲಾವಿದ ರಾಜು ತಂಡದಿಂದ ಬೀದಿ ನಾಟಕ ಮೂಲಕ ಅರಿವು ಮೂಡಿಸಿದರು.ಈ ಸಂದರ್ಭ ಡಿಎಚ್ಒ ಡಾ. ಸತೀಶ್, ಟಿಎಚ್ಒ ಡಾ.ಶ್ರೀನಿವಾಸ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಅನುಗ್ರಹ ಪದವಿ ಕಾಲೇಜು ಪ್ರಾಂಶುಪಾಲ ಪಂಡರಿನಾಥನಾಯ್ಡು ಮತ್ತಿತರರು ಇದ್ದರು.
Back to top button
error: Content is protected !!