ಸಭೆ

7ನೇ ಬಾರಿಗೆ ಆನೆಕೆರೆ ಸರ್ವೆ ನಡೆಸಲು ಮಾಸಿಕ ಸಭೆಯಲ್ಲಿ ನಿರ್ಣಯ

ಕುಶಾಲನಗರ, ಮೇ 25: ಕೂಡುಮಂಗಳೂರು ಗ್ರಾಪಂ ಮಾಸಿಕ ಸಭೆ ಪಂಚಾಯ್ತಿ ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿರುವ ಆನೆ ಕೆರೆಯ ಜಾಗ ಒತ್ತುವರಿಯಾಗಿದ್ದು ಕೆರೆಯನ್ನು ಮತ್ತೊಮ್ಮೆ ಸರ್ವೆ ನಡೆಸಿ‌ ಪರಿಶೀಲಿಸುವಂತೆ ಗ್ರಾಮ ಪಂಚಾಯತಿಯ ಸಭೆಯಲ್ಲಿ ಸರ್ವ ಸದಸ್ಯರು ಒತ್ತಾಯ ಮಾಡಿದರು.
ಕೆರೆಯ ಜಾಗವು ಒತ್ತುವರಿ ಆಗಿದೆ ಎಂದು ಕಳೆದ ನಾಲ್ಕು ತಿಂಗಳಿಂದ ಏಳು ಬಾರಿ ಸರ್ವೆ ನಡೆಸಿದರೂ ಸಹ ಸರ್ವೆ ವರದಿ ಸಮರ್ಪಕವಾಗಿಲ್ಲ. ಇನ್ನೂ ಕೆಲವು ಮಂದಿ ಒತ್ತುವರಿ ಮಾಡಿಕೊಂಡಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ಫಿಲೋಮಿನಾ, ದಿನೇಶ್, ಗೌರಮ್ಮ ಸೇರಿದಂತೆ ಆರೋಪಿಸಿದ ಸರ್ವ ಸದಸ್ಯರು ಮತ್ತೊಮ್ಮೆ ಕಂದಾಯ ಇಲಾಖೆಯ ಮೂಲಕ ಸರ್ವೆ ನಡೆಸಲು ಗ್ರಾಮ ಪಂಚಾಯತಿ ವತಿಯಿಂದ ಪತ್ರ ವ್ಯವಹಾರ ಮಾಡುವಂತೆ ಮಾಸಿಕ ಸಭೆಯಲ್ಲಿ ಒತ್ತಾಯ ಮಾಡಿದರು. ಸರಕಾರ ನೀಡಿರುವ ಹಕ್ಕು ಪತ್ರಗಳ ಅಧಾರದ ಮೇಲೆ ತಮ್ಮ ಮನೆಗಳನ್ನು ನಿರ್ಮಿಸಲು ಅನುಮತಿ ಇದ್ದರೂ ಸಹ ಹೆಚ್ಚುವರಿಯಾಗಿ ಪೈಸಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಸಭೆಯಲ್ಲಿ ಹಾಜರಿದ್ದ ಸದಸ್ಯರು ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಯೋಜನೆಗೆ ಕ್ರಿಯಾ ಯೋಜನೆಯನ್ನು ತಯಾರಿಸಲಾಯಿತು. ಮುಂದಿನ ದಿನಗಳಲ್ಲಿ ಮಳೆಗಾಲ ಆರಂಭವಾಗವ ಮುನ್ನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ಗಳು ನಡೆದವು.
ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಗೆ ಬಂದ ಸಾರ್ವಜನಿಕರ ಅರ್ಜಿಗಳನ್ನು ಸಭೆಯ ಗಮನಕ್ಕೆ ತರಲಾಯಿತು.
ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಸಂತೋಷ ಸರಕಾರ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಆನೆಕೆರೆಯ ಸರ್ವೆಯನ್ನು ಏಳು ಬಾರಿ ಕಂದಾಯ ಇಲಾಖೆಯ ಮೂಲಕ ನಡೆಸಲಾಗಿದೆ‌. ಆದರೆ ಇಲಾಖೆಯವರು ಗುರುತಿಸಿದ ಜಾಗಕ್ಕೆ ಬೇಲಿ ನಿರ್ಮಾಣ ಮಾಡಬೇಕಾಗಿದೆ. ಆದರೂ ಸದಸ್ಯರು ಸಭೆಯಲ್ಲಿ ಒತ್ತಾಯಿಸಿದ ಮೇರೆಗೆ ಕಂದಾಯ ಇಲಾಖೆಗೆ ಪತ್ರವ್ಯವಹಾರ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!