ಕುಶಾಲನಗರ, ಮೇ 31: ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೊಮೆಂಟ್ ಸಂಯುಕ್ತ ಆಶ್ರಯದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಗಿರಿಜನ ಹಾಡಿಯ ಗರ್ಭಿಣಿಯರಿಗೆ ಸಿಕಲ್ ಸೆಲ್ ಅನಿಮಿಯಾ ಪತ್ತೆ ಹಚ್ಚಲು ರಕ್ತ ಪರೀಕ್ಷೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞರಾದ ಡಾ. ಪ್ರತಿಭಾ,
ಶಸ್ತ್ರಚಿಕಿತ್ಸಕರಾದ ಡಾ. ಮಧುಸೂಧನ್, ಗಿರಿಜನ ಹಾಡಿಯ ವೈದ್ಯಾಧಿಕಾರಿ ಡಾ. ಚೇತನ್ ರವರು ಆರೋಗ್ಯ ತಪಾಸಣೆ ನಡೆಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು, ಆಸ್ಪತ್ರೆಯಲ್ಲಿ ಹೆರಿಗೆ ಬಗ್ಗೆ, ಮಕ್ಕಳಿಗೆ ನೀಡುವ ರಕ್ಷಣಾ ಲಸಿಕೆ ಬಗ್ಗೆ ಹಾಗೂ ಆರೋಗ್ಯ ಇಲಾಖೆಯ ಸೇವೆ ಮತ್ತು ಸೌಲಭ್ಯಗಳ ಅರಿವು ಮೂಡಿಸಿದರು.
ಈ ಸಂದರ್ಭ ವಿವೇಕಾನಂದ ಮೂಮೆಂಟ್ ನ ಪೂಜಾ, ಹೇಮಂತ್, ವೈಶಾಲಿ, ಹರೀಶ್ ಪಾಲ್ಗೊಂಡಿದ್ದರು.
Back to top button
error: Content is protected !!