ಕುಶಾಲನಗರ, ಜೂ 03:
ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ವೀಕ್ಷಣೆಗೆ ಜಿಲ್ಲಾ ಮಟ್ಟದಲ್ಲಿ ತಂಡಗಳನ್ನು ರಚನೆ ಮಾಡಿದ್ದು, ಅದರಂತೆಯೇ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಮಗಾರಿಗಳ ಪರಿಶೀಲನೆ ಕಾರ್ಯ ನಡೆಸಿತು.
ತಾಲ್ಲೂಕು ವ್ಯಾಪ್ತಿಯ ಕೂಡಿಗೆ, ಕೂಡುಮಂಗಳೂರು, ಹೆಬ್ಬಾಲೆ, ತೊರೆನೂರು, ಶಿರಂಗಾಲ, ಗುಡ್ಡೆಹೊಸೂರು ಸೇರಿದಂತೆ ವಿವಿಧ ಗ್ರಾಮಗಳಿಗೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಸೇರಿದಂತೆ ತಾಲ್ಲೂಕು ಪಂಚಾಯತಿ ಅಧಿಕಾರಿ ವರ್ಗದವರು, ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ವಚ್ಛ ಭಾರತ್ ಯೋಜನೆಯ ಅಡಿಯಲ್ಲಿ ಗ್ರಾಮೀಣ ಸ್ವಚ್ಛ ಸರ್ವೇಕ್ಷಣ ಮೌಲ್ಯಮಾಪನದ ಅಡಿಯಲ್ಲಿ ಸ್ವಚ್ಛತಾ ಸಂಕೀರ್ಣ, ಸೊಪಿಟ್, ಡ್ರೈನೇಜ್, ಶೌಚಾಲಯಗಳ ಪರಿಶೀಲನೆ ನಡೆಸಲಾಯಿತು.
Back to top button
error: Content is protected !!