ಕುಶಾಲನಗರ, ಜು 04: 2021-22 ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಪಡೆದಿರುವ ಕೂಡುಮಂಗಳೂರು ಗ್ರಾಮಪಂಚಾಯಿತಿಗೆ ಪ್ರಶಸ್ತಿ ಪತ್ರ ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಮಂಗಳವಾರ ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಆಕಾಶ್ ಎಸ್. ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಕೂಡುಮಂಗಳೂರು ಗ್ರಾ.ಪಂ.ನ ಅಧ್ಯಕ್ಷರಾದ ಇಂದಿರಾ ರಮೇಶ್, ಉಪಾಧ್ಯಕ್ಷರಾದ ಭಾಸ್ಕರ್ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರು ಪ್ರಶಸ್ತಿ ಸ್ವೀಕರಿಸಿದರು.
ಮಾನ್ಯ ಜಿ.ಪಂ.ಉಪಕಾರ್ಯದರ್ಶಿಗಳು, ಮಾನ್ಯ ಮುಖ್ಯ ಲೆಕ್ಕಾಧಿಕಾರಿಗಳು, ಮಾನ್ಯ ಯೋಜನಾ ನಿರ್ದೇಶಕರು, ತಾಂ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಇತರರು ಇದ್ದರು.
Back to top button
error: Content is protected !!