ಕುಶಾಲನಗರ, ಜುಲೈ 05: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೌತಿ ಖಾತೆ ಆಂದೋಲನ ಕಾರ್ಯಕ್ರಮ ಕೂಡಿಗೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಕುಶಾಲನಗರ ತಾಲ್ಲೂಕು ಉಪ ತಹಶೀಲ್ದಾರ್ ಮಧುಸೂದನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಆಂದೋಲನದಲ್ಲಿ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ 6 ಉಪ ಗ್ರಾಮಗಳ ರೈತರು, ಸಾರ್ವಜನಿಕರು, ಗ್ರಾಮಸ್ಥರು ಭಾಗವಹಿಸಿ ತಮ್ಮ ತಮ್ಮ ಜಮೀನಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಮಾಹಿತಿಯನ್ನು ಪಡೆದುಕೊಂಡರು.
ಸಭೆಯಲ್ಲಿ ಪಟ್ಟೆದಾರಿಕೆ ಬದಲಾವಣೆ, ಪಹಣಿಯಲ್ಲಿನ ತಿದ್ದುಪಡಿ, ಸಂಬಂಧಿಸಿದ ಅಗತ್ಯ ದಾಖಲಾತಿಗಳಾದ ಮೂಲ ಜಮಾಬಂದಿ, ಪಹಣೆಯ ಆಕಾರ್ ಬಂದ್, ವಂಶವೃಕ್ಷ, ಮರಣ ದೃಢೀಕರಣ ಪತ್ರ, ನೈಜ ಧೃಡೀಕೃತ ದಾಖಲೆಗಳ ಪರಿಶೀಲನೆ ನಡೆಯಿತು. ಇದರಲ್ಲಿ ಪೌತಿ ಖಾತೆಗೆ ಸಂಬಂಧಿಸಿದ ಎಲ್ಲಾ ದಾಖಲೆಯನ್ನು ಒಳಗೊಂಡ ಗ್ರಾಮಸ್ಥರು ದಾಖಲೆಯನ್ನು ಹಾಜರುಪಡಿಸಿದರು. ಆಂದೋಲನದ ಕಾರ್ಯಕ್ರಮದಲ್ಲಿ ಹುದುಗೂರು, ಮಲ್ಲೇನಹಳ್ಳಿ, ಮದಲಾಪುರ, ಹೆಗ್ಗಡಹಳ್ಳಿ, ಕೂಡಿಗೆ , ಕೋಟೆ, ಕಾಳಿದೇವನ ಹೊಸೂರು ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿದರು.
ಈ ಸಂದರ್ಭ ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೇಗೌಡ, ಅಭಿವೃದ್ಧಿ ಅಧಿಕಾರಿ ಅಂಜನಾ ದೇವಿಯ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!