ಕುಶಾಲನಗರ, ಫೆ 26: ಫೆ.25 ರಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲನಗರದಿಂದ ಶನಿವಾರಸಂತೆಗೆ ಹೋಗುವ ಮುಖ್ಯ ರಸ್ತೆಯ ಅರಗಲ್ಲು ಗ್ರಾಮದ ಬಳಿ ನಡೆದ ಖಾಸಗಿ ಬಸ್ ಹಾಗೂ ಸ್ಕೂಟಿಯು ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ದ ಮೊಕದ್ದಮೆ ದಾಖಲಿಸಲಾಗಿದೆ.
ಬಸ್ ಚಾಲಕ ಮುರುಗೇಶ್ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮದ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ ಹಾಗೂ ಅಜಾಗರಕತೆಯಿಂದ ವಾಹನ ಚಾಲನೆ ಮಾಡಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಪಡಿಸಿ ಮರಣಕ್ಕೆ ಕಾರಣವಾಗಿರುವ ಮುರುಗೇಶ್ ವಿರುದ್ಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 281, 105 ಬಿ.ಎನ್.ಎಸ್ & 185 ಐಎಂವಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ನೆಹರು ಬಡಾವಣೆ ನಿವಾಸಿ ಆರೋಪಿ ಮುರುಗೇಶ್ ಸಿ, (55ವರ್ಷ) ಎಂಬಾತನನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
Back to top button
error: Content is protected !!