ಕ್ರೈಂ

ತೇಗದ ನಾಟಾ ಅಕ್ರಮ ಸಾಗಾಟ: ಮಾಲು ಹಾಗೂ ವಾಹನ ಸಹಿತ ಮೂವರು ವಶ

ಕುಶಾಲನಗರ, ಜು 11:  ಯಡವನಾಡು ಮೀಸಲು ಅರಣ್ಯ ಪ್ರದೇಶದಿಂದ ಅಕ್ರಮವಾಗಿ ತೇಗದ ಮರವನ್ನು ಕಡಿದು ನಾಟಾಗಳಾಗಿ ಪರಿವರ್ತಿಸಿ ಸಾಗಾಟ ಮಾಡುತ್ತಿದ್ದ ಸಂದರ್ಭ ಅರಣ್ಯಾಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ತೇಗದ ನಾಟಾ ಹಾಗೂ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.

ಯಡವನಾಡು ಗ್ರಾಮದ ತೀರ್ಥನಂದ ಆಲಿಯಾಸ್ ಸಂತೋಷ್,ಯತೀಶ್ ಹಾಗೂ ಬಿ.ಸಿ. ತೀರ್ಥನಂದ ಅವರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅದೇ ಗ್ರಾಮದ ವಿನು,ಶರತ್ ಓಡಿ ಹೋಗಿ ತಲೆ ಮರೆಸಿಕೊಂಡಿದ್ದಾರೆ.

ಸೋಮವಾರಪೇಟೆ ವಲಯದ ಹುದುಗೂರು ಶಾಖೆಯ ಯಡವನಾಡು ಅರಣ್ಯ ಪ್ರದೇಶದಲ್ಲಿ ತೇಗದ ಮರವನ್ನು ಕಡಿದು ಅದರ ನಾಟಕಗಳನ್ನು ಪಿಕ್ ಆಪ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಹುದುಗೂರು ಶಾಖೆಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮರದ ನಾಟಾ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಪೂವಯ್ಯ ಹಾಗೂ ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಎಚ್.ಪಿ‌.ಚೇತನ್ ಹಾಗೂ ಹುದುಗೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಸ್.ಬಿ.ಸತೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಭರತ್,ಎಂ.ಕೆ.ಮನು,ಅರಣ್ಯ ಪಾಲಕರಾದ ಪಿ.ಕೆ.ಚೇತನ್,ಸಿದ್ಧರಾಜು,ಭೀಮಣ್ಣ,ಅರಣ್ಯ ವೀಕ್ಷಕರಾದ ಡಿಲಕ್ಸ್,ದೀಕ್ಷಿತ್ ಹಾಗೂ ಚಾಲಕ ನಂದೀಶ್ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!