ಪ್ರಶಸ್ತಿ

ಸಮಾಜ ಸೇವಕ ಪ್ರಶಸ್ತಿ ಪಡೆದುಕೊಂಡ ಉದ್ಯಮಿ, ಸಮಾಜ ಸೇವಕ ನಾಪಂಡ ಮುತ್ತಪ್ಪ

ಕುಶಾಲನಗರ, ಅ 19: ಬೆಂಗಳೂರಿನಲ್ಲಿ ನಡೆದ ಪವರ್ ಟಿವಿಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಸಿದ್ದಲಿಂಗಪುರದ ಉದ್ಯಮಿ ಹಾಗೂ ಸಮಾಜ ಸೇವಕರು ಹಾಗೂ ದಾನಿಗಳಾದ ನಾಪಂಡ ಮುತ್ತಪ್ಪ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಾಪಂಡ ಮುತ್ತಪ್ಪ ಅವರು ಕೊಡಗು ಜಿಲ್ಲೆ ಮಾತ್ರವಲ್ಲದೆ ಹಲವಾರು ಜಿಲ್ಲೆಗಳಲ್ಲಿ ಸಮಾಜ ಸೇವೆ ಮಾಡಿಕೊಂಡು ಬರುತ್ತಿರುವುದನ್ನು ಗುರುತಿಸಿ ಪವರ್ ಟಿವಿ ವತಿಯಿಂದ ನಾಪಂಡ ಮುತ್ತಪ್ಪ ಅವರಿಗೆ ಪ್ರಶಸ್ತಿ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವ ಕುಮಾರ್ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಪವರ್ ಟಿವಿಯ ಮುಖ್ಯಸ್ಥರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!