ಕ್ರೀಡೆ

ಕೊಡಗು ವಿಶ್ವವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ:

ವಿದ್ಯಾರ್ಥಿಗಳು ಕ್ರೀಡಾಮನೋಭಾವವನ್ನು ಬೆಳೆಸಿಕೊಳ್ಳಿ: ಪ್ರೊ. ಅಶೋಕ ಸಂ. ಆಲೂರ

ಕುಶಾಲನಗರ ಜು20: ವಿದ್ಯಾರ್ಥಿಗಳು ಸೋಲು-ಗೆಲವಿನ ಕಡೆಗೆ ಗಮನ ಕೊಡದೇ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂ. ಆಲೂರ ಅವರು ಕರೆ ನೀಡಿದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿನ ವಿಜ್ಞಾನ ಸಂಕೀರ್ಣದಲ್ಲಿ ಒಳಾಂಗಣದಲ್ಲಿ ಹಮ್ಮಿಕೊಂಡಿದ್ದ 2022-2023ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಮಾನಸಿಕ ಆರೋಗ್ಯಕ್ಕಾಗಿ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕವಾಗಿ ಆರೋಗ್ಯವಂತರಾಗಿದ್ದಾಗ ಅಧ್ಯಯನದ ಮೇಲೆ ಸುಲಭವಾಗಿ ಗಮನಹರಿಸಬಹುದು. ಆತ್ಮವಿಶ್ವಾಸ, ಮಾನಸಿಕ ಜಾಗರೂಕತೆಯನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯ ಕುಲಸಚಿವರಾದ (ಮೌಲ್ಯಮಾಪನ) ಡಾ. ಸೀನಪ್ಪ ಅವರು ಮತ್ತು ಪ್ರಭಾರ ನಿರ್ದೇಶಕರಾದ ಪ್ರೊ. ಕೆ.ಕೆ. ಧರ್ಮಪ್ಪ, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ವಿಜಯ್ ಎಚ್. ಆರ್. ಕ್ರೀಡಾಕೂಟವನ್ನು ಆಯೋಜಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!