ಕುಶಾಲನಗರ ಜು 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶೌರ್ಯ, ವಿಪತ್ತು ತಂಡ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಕುಶಾಲನಗರ ಕಾವೇರಿ ನದಿ ತೀರದಲ್ಲಿ ಗಿಡ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ವಿ ಎಸ್ ಆನಂದಕುಮಾರ್ ಅವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಈ ಸಂದರ್ಭ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಈ ಸಾಲಿನಲ್ಲಿ ಯೋಜನಾ ವೃತ್ತದ ಒಟ್ಟು ಏಳು ತಾಲೂಕುಗಳಲ್ಲಿ 30 ಸಾವಿರ ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ತಿಳಿಸಿದರು. ಈ ಸಂಬಂಧ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ 2,500 ಗಿಡಗಳನ್ನು ನಾಟಿ ಮಾಡುವ ಕೆಲಸಕ್ಕೆ ಚಾಲನೆ ದೊರೆತಿದೆ ಎಂದರು. ಹೂವು ಹಣ್ಣು ನೆರಳು ನೀಡುವ ಗಿಡಗಳನ್ನು ನೆಡಲಾಗುತ್ತಿದೆ ಎಂದರು.
ಯೋಜನಾಧಿಕಾರಿ ರೋಹಿತ್ ಅವರು ಮಾತನಾಡಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ 5 ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಈಗಾಗಲೇ ಪೂರ್ವಸಿದ್ಧತೆ ನಡೆದಿದೆ. ಯೋಜನೆಯ ಶೌರ್ಯ ವಿಪತ್ತು ತಂಡದ ಸದಸ್ಯರು ಸೇರಿದಂತೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಈ ಯೋಜನೆಯನ್ನು ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭ ಜನಜಾಗೃತಿ ವೇದಿಕೆಯ ಸದಸ್ಯರಾದ ಎಂ ಎನ್ ಚಂದ್ರಮೋಹನ್, ಯೋಜನೆಯ ಕುಶಾಲನಗರ ವಲಯ ಮೇಲ್ವಿಚಾರಕರಾದ ಪೂರ್ಣಿಮಾ, ಕೃಷಿ ಅಧಿಕಾರಿ ರಾಜು, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ ಕೆ ಜಗದೀಶ್, ಕಾವೇರಿ ರಿವರ್ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾದ ಡಿ ಆರ್ ಸೋಮಶೇಖರ್, ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ತಂಡದ 25ಕ್ಕೂ ಅಧಿಕ ಕಾರ್ಯಕರ್ತರುಗಳು ಗಿಡ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Back to top button
error: Content is protected !!