ಕುಶಾಲನಗರ ಜು 20: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಜು 07 ರಿಂದ ಜು 28 ರ ವರೆಗೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಏಕಬಳಕೆ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಹಾಗೂ ಪೌರಕಾರ್ಮಿಕರಿಗೆ ಏಕಬಳಕೆ ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು
ಪ್ಲಾಸ್ಟಿಕ್ ತ್ಯಾಜ್ಯದಿಂದ ಸಂಭವಿಸಬಹುದಾದ ಗಾಳಿ,ನೀರು ಮತ್ತು ಮಣ್ಣಿನ ಮಾಲಿನ್ಯದ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯ ಪುರಸಭಾ ಸಭಾಂಗಣದಲ್ಲಿ ನಡೆಯಿತು.
ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ನೆರೆದಿದ್ದವರಿಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಂಗವಾಗಿ ಪುರಸಭಾ ಆರೋಗ್ಯ ನಿರೀಕ್ಷಕ ಉದಯಕುಮಾರ್ ಅವರು ತಂಡದೊಂದಿಗೆ ಪ್ರತಿ ಅಂಗಟ್ಟು ಮುಂಗಟ್ಟುಗಳಿಗೆ ಭೇಟಿ ನೀಡಿ ಈ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ಅವರಲಿದ್ದ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿ ಪ್ಲಾಸ್ಟಿಕ್ ಬಳಸದಂತೆ ಸೂಚಿಸಲಾಯಿತು.
Back to top button
error: Content is protected !!