ಕುಶಾಲನಗರ, ಜು 23:ಮಳೆ ಹೆಚ್ಚಾಗಿದ್ದು ಹಾರಂಗಿ ಜಲಾಶಯದಿಂದ ಗರಿಷ್ಠ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಬಗ್ಗೆ ಗ್ರಾಪಂ ಧ್ವನಿವರ್ಧಕ ಮೂಲಕ ಎಚ್ಚರಿಕೆ ರವಾನಿಸುತ್ತಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗುತ್ತಿದೆ.