ಕುಶಾಲನಗರ, ಜು 26: ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ವಾರ್ಡ್ ನಂ. 01 ರ (ಪರಿಶಿಷ್ಟ ಪಂಗಡ ಮೀಸಲು ) ಸದಸ್ಯರೋರ್ವರ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾದ ಕೆ.ಆರ್. ಸುರೇಶ್ ಅವರು ಬಿಜೆಪಿ ಅಭ್ಯರ್ಥಿಯನ್ನು ಮಣಿಸಿ 82 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಗೆಲುವಿನ ರುವಾರಿಗಳಾದ ಶಾಸಕ ಡಾ. ಮಂತರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ ಪಿ ಶಶಿಧರ್, ಕೊಡಗು ಜಿಲ್ಲಾ ಕಾಂಗ್ರೇಸ್ ನ ಮಾಜಿ ಅಧ್ಯಕ್ಷರಾದ ಕೆ ಕೆ ಮಂಜುನಾಥ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ವಲಯ ಘಟಕಾಧ್ಯಕ್ಷರಾದ ಹೀರಪ್ಪ ಹಾಗೂ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊಡಗು ಜಿಲ್ಲಾ ಕಾಂಗ್ರೇಸ್ ನ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಹಾಗೂ ಪ್ರಮುಖರು ಈ ಗೆಲುವಿನ ವಿಚಾರವಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಶುಭಾಶಯಗಳನ್ನು ಕೋರಿದ್ದಾರೆ.
Back to top button
error: Content is protected !!