ಕುಶಾಲನಗರ, ಆ 01: ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಲ್.ಕೆ.ಜಿ ಹಾಗೂ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಶಾಸಕ ಮಂತರ್ ಗೌಡ ಸಮವಸ್ತ್ರ ವಿತರಿಸಿದರು.
ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಉತ್ತಮವಾದ ಕೆಲಸಗಳನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿ ಶಾಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದರು.
ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಮ್ಮಿಯಿಲ್ಲದಂತೆ ಆಗಬೇಕು ಎಂದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕುಶಾಲನಗರದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಮಂತರ್ ಗೌಡರವರು ವಿಶೇಷವಾದ ಕಾಳಜಿ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಯ 60 ಮಕ್ಕಳಿಗೆ ಶಾಸಕರು ಸಮವಸ್ತ್ರ ವಿತರಿಸಿದರು. ನಂತರ ಶಾಸಕರು ಹಾಗೂ ಅತಿಥಿಗಳು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಂದನ್ ವಹಿಸಿದ್ದರು.
ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ನಗರಾಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಅಧ್ಯಕ್ಷ ಜೈವರ್ಧನ್, ಸದಸ್ಯರಾದ ವಿ.ಎಸ್.ಆನಂದ್ ಕುಮಾರ್, ಶೇಖ್ ಕಲೀಮುಲ್ಲಾ, ಅಮೃತ್ ರಾಜ್, ಸಮಾಜ ಸೇವಕ ರಂಜನ್.ಎಚ್.ಪಿ, ಕಾಂಗ್ರೆಸ್ ಮುಖಂಡರಾದ ಆರ್.ಕೆ.ನಾಗೇಂದ್ರ ಬಾಬು, ನಟೇಶ್ ಗೌಡ, ಶಿವಶಂಕರ್, ಕಿರಣ್ ಹಾಗೂ ಇನ್ನಿತರರು ಇದ್ದರು.
Back to top button
error: Content is protected !!