ಕಾರ್ಯಕ್ರಮ

ಸರಕಾರಿ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಕೈಗೊಂಡ ಅಭಿವೃದ್ದಿ ಕಾಮಗಾರಿಗೆ ಚಾಲನೆ

ಕುಶಾಲನಗರ, ಆ 03: ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಮರೆಯದೇ ಅಭಿವೃದ್ಧಿಗೆ ಕೈಜೋಡಿಸಿರುವುದು ಅಭಿನಂದನೀಯ. ಇದು ಮುಂದಿನ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿದೆ ಎಂದು ಪುರಸಭೆ ಸದಸ್ಯ ದಿನೇಶ್ ಅಭಿಪ್ರಾಯಪಟ್ಟರು.
ಸರ್ಕಾರಿ ಪದವಿ ಪೂರ್ವ ಕಾಲೇಜು. ಫ್ರೌಢಶಾಲಾ ಹಳೆ ವಿದ್ಯಾರ್ಥಿಗಳ ಟ್ರಸ್ಟ್ ವತಿಯಿಂದ ಗುರುವಾರ ಏರ್ಪಡಿಸಿದ್ದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,ಶಾಲೆಗಳ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಸಹಕಾರ ಹೆಚ್ಚು ಪ್ರಸ್ತುತವಾಗಿದ್ದು, ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹಾದಿಗೆ ಮಾರ್ಗದರ್ಶನ ಸಿಗಲಿದೆ. ಹಳೆ ವಿದ್ಯಾರ್ಥಿಗಳು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಮುಂದಿನ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನೂಕೂಲ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಟ್ರಸ್ಟ್ ಗೌರವ ಅಧ್ಯಕ್ಷ ವಿ.ಎಸ್. ಆನಂದ್ ಕುಮಾರ್ ಮಾತನಾಡಿ, ಪ್ರಾರಂಭಿಕವಾಗಿ ಶಾಲೆಯ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು ಮುಂದಾಗಿದ್ದು. ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿ ರೂಪಿಸುವುದೇ ಹಳೆ ವಿದ್ಯಾರ್ಥಿಗಳ ಟ್ರಸ್ಟ್ ನ ಪ್ರಮುಖ ಧ್ಯೇಯೋದ್ದೇಶವಾಗಿದೆ ಎಂದರು.
ಹಳೆ ವಿದ್ಯಾರ್ಥಿಗಳ ಟ್ರಸ್ಟ್ ಅಧ್ಯಕ್ಷ ಶಿವರಾಜ್ ಮಾತನಾಡಿ, ಅನೇಕ ದಶಕಗಳನ್ನು ಕಂಡಿರುವ ಈ ಶಾಲೆ. ಭವಿಷ್ಯದಲ್ಲೂ ಶಿಕ್ಷಣಾಂಮೃತವನ್ನು ನಿರಂತರವಾಗಿ ವಿದ್ಯಾರ್ಥಿಗಳಿಗೆ ಉಣಬಡಿಸಬೇಕೆನ್ನುವ ಕನಸನ್ನಿಟ್ಟುಕೊಂಡ ಹಳೆ ವಿದ್ಯಾರ್ಥಿಗಳ ತಂಡ ಇಂತಹ ಕಾರ್ಯಕ್ಕೆ ಮುಂದಾಗಿದೆ ಎಂದರು.
ಈ ಸಂದರ್ಭ ಹಳೆ ವಿದ್ಯಾರ್ಥಿಗಳ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆದಂ, ಖಜಾಂಚಿ ಜಗದೀಶ್, ಸಂಘಟನಾ ಕಾರ್ಯದರ್ಶಿ ರವಿ, ನಿರ್ದೇಶಕರಾದ ನವ್ಯ, ಕಮಲ್ ರಾಜ್ ಥಫಾ, ಶಾಲೆಯ ಉಪ ಪ್ರಾಂಶುಪಾಲರಾದ ಪರಮೇಶ್ವರಪ್ಪ, ಶಿಕ್ಷಕರಾದ ಮಂಜುನಾಥ್, ಉರಾ ನಾಗೇಶ್, ಸದಾಶಿವಯ್ಯ ಎಸ್ ಪಲ್ಲೇದ್, ಸೇರಿದಂತೆ ಶಾಲೆಯ ಶಿಕ್ಷಕ ವೃಂದದವರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!