ಕುಶಾಲನಗರ, ಆ 04: ಇತ್ತೀಚೆಗೆ ತೊರೆನೂರು ಪ್ರೌಢಶಾಲಾ ವಿದ್ಯಾರ್ಥಿಗಳು ಆಟೋದಲ್ಲಿ ತೆರಳುವಾಗ ಆಟೋ ಪಲ್ಟಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಮಾರ್ಗವಾಗಿ ಬಸ್ ಸಂಚಾರ ಇಲ್ಲದ ಕಾರಣ. ಆಟೋವನ್ನು ಅವಲಂಬಿಸಿರುವ ವಿದ್ಯಾರ್ಥಿಗಳ ಅನುಕೂಲಕ್ಕೆ ಸಾರಿಗೆ ಸೌಲಭ್ಯ ಒದಗಿಸುವಂತೆ ತೊರೆನೂರು ಪ್ರೌಢಶಾಲಾ ಶಿಕ್ಷಕ ವೃಂದ ಶಾಸಕ ಮಂಥರ್ ಗೌಡ ಅವರಿಗೆ ಮನವಿ ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ಕ್ರಮಕೈಗೊಂಡ ಶಾಸಕರು, ಚಿಕ್ಕ ಅಳುವಾರ ಹೆಬ್ಬಾಲೆ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಒಂದನ್ನು ಶಾಲಾ ಸಮಯಕ್ಕೆ ಅನುಗುಣವಾಗಿ ತೊರೆನೂರು ಮಾರ್ಗವಾಗಿ ಸಂಚರಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ. ಇವರಿಗೆ ತೊರೆನೂರು ಪ್ರೌಢಶಾಲಾ ಶಾಲಾಭಿವೃದ್ದಿ ಸಮಿತಿ, ಶಿಕ್ಷಕ ವೃಂದ ಧನ್ಯವಾದ ಸಲ್ಲಿಸಿದೆ.
Back to top button
error: Content is protected !!