ಕುಶಾಲನಗರ, ಫೆ 08: ಚಲಿಸುತ್ತಿದ್ದ ಕಾರೊಂದು ಹೆದ್ದಾರಿಯಲ್ಲಿ ಬೆಂಕಿಗೆ ಆಹುತಿಯಾದ ಘಟನೆ ಆನೆಕಾಡು ಬಳಿ ಶನಿವಾರ ರಾತ್ರಿ ನಡೆದಿದೆ.
ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ಉಡುಪಿಯಿಂದ ಮೈಸೂರಿಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ಅಪಾಯ ಅರಿತ ಕಾರ್ ಡ್ರೈವರ್ ಸೂಚನೆಯಂತೆ ಮಜೀದ್ ಅವರು ಕಾರಿನಿಂದ ಕೆಳಗಿಳಿದಿದ್ದಾರೆ. ಹುಂಡೈ ಕ್ರೆಟಾ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಕುಶಾಲನಗರ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Back to top button
error: Content is protected !!