ಕುಶಾಲನಗರ, ಆ 17: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ವತಿಯಿಂದ ಕೂಡ್ಲೂರು ಯೂನಿಕ್ ಅಕಾಡೆಮಿ ಸ್ಕೂಲ್ ಆಶ್ರಯದಲ್ಲಿ ಕೂಡಿಗೆ ಕ್ರೀಡಾ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರೌಢಶಾಲಾ ವಿಭಾಗದ ಎ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಉತ್ತಮ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತರಬೇಕು ಎಂದರು.
ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಸದಾಶಿವಯ್ಯ ಎಸ್.ಪಲ್ಲೇದ್ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ,ದೈಹಿಕ ಮಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಿಗೆ ಪಾಠದೊಂದಿಗೆ ಕ್ರೀಡೆಗಳು ಮುಖ್ಯವೆಂದರು.
ವಿದ್ಯಾರ್ಥಿಗಳಿಗೆ ಆರೋಗ್ಯವಾಗಿರಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಂಡದ ಆಟಗಾರರ ಪಾತ್ರವನ್ನು ಹಾಗೂ ನಾಯಕತ್ವ ಪಾತ್ರವನ್ನು ಅವರವರ ಅನುಭವದ ಮೇಲೆ ನಿರ್ವಹಿಸುತ್ತಾರೆ. ಇಲ್ಲಿ ಸೋಲು ಗೆಲುವು ಸಮನಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ,ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಾಗಿದೆ, ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರತಿಭೆ ಹೊರಹೊಮ್ಮಲು ವಲಯ ಮಟ್ಟದ ಕ್ರೀಡಾಕೂಟ ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಕೂಡಿಗೆ ಕ್ರೀಡಾಶಾಲಾ ಪ್ರಾಂಶುಪಾಲ ದೇವಕುಮಾರ್, ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘ್ ಕಾರ್ಯದರ್ಶಿ ಟಿ.ವಿ.ಶೈಲಾ,ಯೂನಿಕ್ ಅಕಾಡೆಮಿ ಸ್ಕೂಲ್ ಸಂಸ್ಥೆ ಅಧ್ಯಕ್ಷ ಟಿ.ಕೆ.ರವಿ,ಮುಖ್ಯ ಶಿಕ್ಷಕ ಹರೀಶ್ ಲಕ್ಷ್ಮಣ್,ವಲಯ ಮಟ್ಟದ ಕ್ರೀಡಾಕೂಟದ ಕಾರ್ಯದರ್ಶಿ ಬೋಜೇಗೌಡ,ಮೂಕಾಂಬಿಕಾ ಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್,ಮಸಗೋಡು ಚನ್ನಮ್ಮ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ನಾಗೇಂದ್ರ ಮತ್ತಿತರರು ಇದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕರುಬಂಯ್ಯ,ಸೋಮಶೆಖರ್,ಸುಂದರ್,ಪ್ರತಾಪ್,ಲೋಹೀತ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಬಾಲಕ,ಬಾಲಕಿಯರಿಗೆ ವಾಲಿಬಾಲ್, ಕಬಡ್ಡಿ,ಥ್ರೋಬಾಲ್,ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು.
Back to top button
error: Content is protected !!