ಕುಶಾಲನಗರ, ಆ 19: ಸಾರ್ವಜನಿಕ ಶಿಕ್ಷಣ ಇಲಾಖೆ, ಕೂಡ್ಲೂರು ಯೂನಿಕ್ ಅಕಾಡೆಮಿ ಸ್ಕೂಲ್ ಆಶ್ರಯದಲ್ಲಿ ಕೂಡಿಗೆಯ ಕ್ರೀಡಾ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕುಶಾಲನಗರ ‘ಎ’ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಮೂಕಾಂಬಿಕಾ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಮೂಕಾಂಬಿಕಾ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು
ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದರು.
ಇವರಿಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಸ್. ಗೋಪಾಲ್, ಸಂಸ್ಥೆಯ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಅಭಿನಂದನೆ ಸಲ್ಲಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರತಾಪ್ ಟಿ.ಎನ್, ತರಬೇತುದಾರರಾದ ಆದಂ.ಎಸ್, ಶಾರೂಕ್ ತರಬೇತಿ ನೀಡಿದ್ದರು.
ಸಹ ಶಿಕ್ಷಕರಾದ ಕಾಂತರಾಜ್, ಸುರೇಶ್, ನಗೀನಾಬಾನು ಮಾರ್ಗದರ್ಶನ ನೀಡಿದರು.
Back to top button
error: Content is protected !!