ಕುಶಾಲನಗರ, ಡಿ 19: ಕುಶಾಲನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ನಿರ್ಮಿಸಲಾಗಿರುವ ಕಾವೇರಿ ಪ್ರತಿಮೆಯ ಬಣ್ಣ ಮಾಸಿದ್ದರೂ, ಆ ಕಡೆಗೆ ಗಮನ ಕೊಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಆರೋಪಿಸಿ, ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಕರವೇ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ತಾಲೂಕು ಅಧ್ಯಕ್ಷ ಸಿ. ಎಂ.ಆಸಿಫ್ ನೇತೃತ್ವದಲ್ಲಿ ಇತ್ತೀಚೆಗೆ ಮನವಿ ಪತ್ರ ಸಲ್ಲಿಸಲಾಗಿತ್ತು.
ಕಾವೇರಿ ಕರುನಾಡಿನ ಜೀವನದಿ ಕೊಡಗಿನ ಕುಲದೇವಿಯ ಪ್ರತಿಮೆ ತಾಲೂಕು ಪಂಚಾಯಿತಿ ಮುಂಭಾಗ ಇದ್ದರೂ ಅದರ ನಿರ್ವಹಣೆಗೆ ಅಧಿಕಾರಿಗಳು ಗಮನಹರಿಸಿಲ್ಲ. ಒಂದು ವಾರದ ಗಡುವು ನೀಡುತ್ತೇವೆ ಅಷ್ಟರಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿ ಕುಲದೇವತೆ ಕಾವೇರಿ ಮಾತೆಯ ಪ್ರತಿಮೆಗೆ ಗೌರವ ಸೂಚಿಸಬೇಕು ಎಂದು ಆಗ್ರಹಿಸಿದ್ದರು.
ಮನವಿಗೆ ಸ್ಪಂದನೆ ದೊರೆಯದಿದ್ದರೆ ಮುಂದಿನ ದಿನದಲ್ಲಿ ತಾಲ್ಲೂಕು ಪಂಚಾಯತಿ ಮುಂಭಾಗ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು. ಈ ಮನವಿಗೆ ಸ್ಪಂದಿಸಿರುವ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರತಿಮೆಗೆ ಬಣ್ಣ ಬಳಿದು ಅದರ ಬಗ್ಗೆ ನಿಗಾವಹಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಧನ್ಯವಾದ ಸಲ್ಲಿಸಿದ್ದಾರೆ.
ನಂತರ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ಆರತಿ ಬೆಳಗಲಾಯಿತು.
ಈ ಸಂದರ್ಭ ಜಿಲ್ಲಾಧ್ಯಕ್ಷ ದೀಪಕ್,
ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸಂಧ್ಯಾ ಗಣೇಶ್, ಪ್ರಧಾನ ಕಾರ್ಯದರ್ಶಿ ಶ್ರುತಿ ಗಿರೀಶ್, ಕಾರ್ಯದರ್ಶಿ ಹರಿಣಿ, ಗೀತಾಂಜಲಿ, ಕುಶಾಲನಗರ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ, ಕಾರ್ಯದರ್ಶಿ ಮಂಜು ನಂಜಪ್ಪ, ಸಹಕಾರ್ಯದರ್ಶಿ ಎಂ.ಆರ್.ಗಣೇಶ್, ನಗರ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ, ಸಂದೀಪ್, ಯುವ ಘಟಕದ ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಸಂದೀಪ್, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಪುನೀತ್,ಉಪಾಧ್ಯಕ್ಷ ಮಂಜುನಾಥ್ ಸೇರಿದಂತೆ ಮತ್ತಿತರರು ಹಾಜರಿದ್ದರು.
Back to top button
error: Content is protected !!